Belagavi NewsBelgaum NewsKannada NewsKarnataka News

ನಾವಗೆ ಗ್ರಾಮದಲ್ಲಿ ರಾತ್ರೋರಾತ್ರಿ ದಾಂಧಲೆ : ಹೈಸ್ಕೂಲ್ ಪ್ರೇಮ ಪ್ರಕರಣ ಕಾರಣವೇ?

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಾಲೂಕಿನ ನಾವಗೆ ಗ್ರಾಮದಲ್ಲಿ ರಾತ್ರೋರಾತ್ರಿ ದುಷ್ಕರ್ಮಿಗಳು ದಾಳಿ ಮಾಡಿದ್ದು, 3 -4 ಮನೆಗಳ ಮೇಲೆ ಕಲ್ಲು ತೂರಲಾಗಿದೆ. 2 ವಾಹನ ಜಖಂ ಗೊಂಡಿದ್ದು, ಭಾರೀ ಪೊಲೀಸ್ ಬಂಧೋಬಸ್ತ್ ಏರ್ಪಡಿಸಲಾಗಿದೆ.

Home add -Advt

ರಾತ್ರಿ 10 ಗಂಟೆ ಹೊತ್ತಿಗೆ 10ಕ್ಕೂ ಹೆಚ್ಚು ಮುಸುಕುದಾರಿಗಳು ಮಾರಕಾಸ್ತ್ರಗಳೊಂದಿಗೆ ಗ್ರಾಮಕ್ಕೆ ಆಗಮಿಸಿ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಒಂದು ಮನೆಗೆ ಹೆಚ್ಚು ಹಾನಿಯಾಗಿದ್ದು, ಇನ್ನೂ ಕೆಲವು ಮನೆಗಳ ಮೇಲೆ ಕಲ್ಲು ತೂರಲಾಗಿದೆ. ಮನೆಯ ಮುಂದೆ ನಿಲ್ಲಿಸಿದ್ದ 2 ವಾಹನಗಳಿಗೂ ಹಾನಿ ಮಾಡಲಾಗಿದೆ.

ಸುದ್ದಿ ತಿಳಿದ ತಕ್ಷಣ ಡಿಸಿಪಿ ರೋಹನ್ ಜಗದೀಶ್ ನೇತೃತ್ವದಲ್ಲಿ ಭಾರೀ ಸಂಖ್ಯೆಯಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಕೆಎಸ್ ಆರ್ ಪಿ ತುಕಡಿ ನಿಯೋಜಿಸಲಾಗಿದೆ.

ಇದೊಂದು 10ನೇ ತರಗತಿ ಪ್ರೇಮ ಪ್ರಕರಣ ಎಂದು ಹೇಳಲಾಗುತ್ತಿದೆಯಾದರೂ ಆರೋಪಿಗಳ ಬಂಧನವಾಗುವವರೆಗೂ ಖಚಿತವಾಗಿ ಹೇಳಲು ಸಾಧ್ಯವಿಲ್ಲ ಎಂದು ಡಿಸಿಪಿ ಪ್ರಗತಿವಾಹಿನಿಗೆ ತಿಳಿಸಿದ್ದಾರೆ. ಆರೋಪಿಗಳ ಪತ್ತೆ 3 ತಂಡಗಳನ್ನು ರಚಿಸಲಾಗಿದೆ.

Related Articles

Back to top button