Latest

ರೇವ್ ಪಾರ್ಟಿ; ನಟಿ ನಿಹಾರಿಕಾ ಕೊನಿಡೆಲಾ ಪೊಲೀಸ್ ವಶಕ್ಕೆ

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಖಾಸಗಿ ಹೋಟೆಲ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಟಾಲಿವುಡ್ ನಟಿ ನಿಹಾರಿಕಾ ಕೊನಿಡೆಲಾ ಸೇರಿದಂತೆ ಹಲವು ಸೆಲೆಬ್ರಿಟಿಗಳ ಮಕ್ಕಳನ್ನು ವಶಕ್ಕೆ ಪಡೆದಿದ್ದಾರೆ.

ಹೈದರಾಬಾದ್ ನ ಬಂಜಾರಾ ಹಿಲ್ಸ್ ನ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನದೆಸಿದ್ದಾರೆ. ಪಾರ್ಟಿಯಲ್ಲಿ ಹಲವು ಟಾಲಿವುಡ್ ನಟ-ನಟಿಯರ ಮಕ್ಕಳು ಭಾಗಿಯಾಗಿದ್ದರು ಎನ್ನಲಾಗಿದೆ. ದಾಳಿ ವೇಳೆ ನಟ ಚಿರಂಜೀವಿ ಸಹೋದರ ನಾಗಬಾಬು ಅವರ ಪುತ್ರಿ ನಟಿ ನಿಹಾರಿಕಾ ಕೊನಿಡೆಲಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೆಲ ಗಂಟೆಗಳ ಕಾಲ ವಿಚಾರಣೆ ನಡೆಸಿದರು ಪೊಲೀಸರು ನಿಹಾರಿಕಾ ಅವರನ್ನು ಮನೆಗೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ ಸೇರ್ಪಡೆ ಖಚಿತ ಪಡಿಸಿದ ಸಭಾಪತಿ ಹೊರಟ್ಟಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button