*ನಿಜಗುಣಾನಂದ ಸ್ವಾಮೀಜಿಗೆ ಜೀವ ಬೆದರಿಕೆ ಪತ್ರ ಬಂದಿರುವ ವಿಚಾರ ಸಿಎಂ ಗಮನಕ್ಕೆ ತರುತ್ತೇನೆಂದ ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ; ಕಿತ್ತೂರು: ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಜೀವ ಬೆದರಿಕೆಯ ಪತ್ರ ಬಂದಿರುವ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ತರುತ್ತೇನೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಕಿತ್ತೂರು ತಾಲೂಕಿನ ಬೈಲೂರು ನಿಷ್ಕಲ ಮಂಟಪಕ್ಕೆ ಭೇಟಿ ನೀಡಿ, ನಿಜಗುಣಾನಂದ ಸ್ವಾಮೀಜಿ ಅವರೊಂದಿಗೆ ಚರ್ಚಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮಾಜ ಪರಿವರ್ತನೆ ಮಾಡವವರಿಗೆ, ಪ್ರಗತಿಪರ ಚಿಂತಕಕರಿಗೆ ಜೀವ ಬೆದರಿಕೆಗಳು ಬರ್ತಾನೆ ಇವೆ. ಆದರೆ ನನಗೆ ಯಾವುದೇ ಜೀವ ಬೆದರಿಕೆಗಳು ಬಂದಿಲ್ಲ.ಈ ರೀತಿಯ ಜೀವ ಬೆದರಿಕೆಗಳು ಬಂದಾಗ, ಸರ್ಕಾರ, ಕಾನೂನು, ಪೋಲೀಸ್ ಇಲಾಖೆ ಇದೆ. ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ ಎಂದರು.
ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡುವವರಿಗೆ ಈ ರೀತಿಯ ಪರಿಸ್ಥಿತಿ ಎದುರಾಗುತ್ತದೆ. ನಾವು ಜಾಗೃತರಾಗಬೇಕು, ಹೋರಾಟವನ್ನು ಮುಂದುವರೆಸಬೇಕು. ನಿಜಗುಣಾನಂದ ಸ್ವಾಮೀಜಿ ಬಸವತತ್ವಗಳನ್ನು ಮನೆ, ಮನೆಗೆ ತಲುಪಿಸುವ ಕಾರ್ಯ ಮಾಡುತ್ತಿದ್ದಾರೆ. ನಾವೂ ಬುದ್ದ, ಬಸವ, ಅಂಬೇಡ್ಕರ್ ಅವರ ತತ್ವಗಳನ್ನು ಮನೆ, ಮನೆಗೆ ತಲುಪಿಸುವ ಕಾರ್ಯ ಮಾಡುತ್ತಿದ್ದೇವೆ. ಅವರ ಹೋರಾಟ, ನಮ್ಮ ಹೋರಾಟ ಒಂದೇ ಆಗಿರುವುದರಿಂದ ನಾನು ಪದೇ ಪದೇ ಶ್ರೀಗಳನ್ನು ಭೇಟಿ ಆಗುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ