*ನಿಖಿಲ್ ಕುಮಾರಸ್ವಾಮಿಗೆ ದೇಗುಲ ಪ್ರವೇಶ ನಿರಾಕರಣೆ*: *ಕಾಂಗ್ರೆಸ್‌ ಕಾರ್ಯಕರ್ತರ ವಿರುದ್ಧ ಜೆಡಿಎಸ್ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಗೆ ದೇವಾಲಯ ಪ್ರವೇಶ ನಿರಾಕರಿಸಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದೊಡ್ಡಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ. ನಿಖಿಲ್ ದೇವಾಲಯಕ್ಕೆ ಭೇಟಿ ನೀಡುವ ಮಾಹಿತಿ ತಿಳಿಯುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ದೇವಾಲಯಕ್ಕೆ ಬೀಗ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆ ಜೆಡಿಎಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಾರಮ್ಮ ದೇವಾಲಯದ ಉದ್ಘಾಟನೆ ಹಾಗೂ ಕುಂಭಾಭಿಷೇಕ ಕಾರ್ಯಕ್ರಮ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ದೇವಾಲಯಕ್ಕೆ ಭೇಟಿ … Continue reading *ನಿಖಿಲ್ ಕುಮಾರಸ್ವಾಮಿಗೆ ದೇಗುಲ ಪ್ರವೇಶ ನಿರಾಕರಣೆ*: *ಕಾಂಗ್ರೆಸ್‌ ಕಾರ್ಯಕರ್ತರ ವಿರುದ್ಧ ಜೆಡಿಎಸ್ ಆಕ್ರೋಶ*