Karnataka NewsLatestPolitics

*ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಮಹಿಳೆ ಮೇಲೆ ಅತ್ಯಾಚಾರ, ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೋರ್ಟ್ ಜಿವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಈ ವಿಚಾರವಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ವಿರುದ್ಧ ಸೆಷನ್ ಕೋರ್ಟ್ ಆದೇಶ ಹೊರಡಿಸಿದೆ. ಯಾರೇ ಆಗಲಿ ಕೋರ್ಟ್ ತೀರ್ಪಿನ ಬಗ್ಗೆ ತಲೆಬಾಗಲೇಬೇಕು. ಹೆಚ್ಚಿನ ವಿಶ್ಲೇಷಣೆ ಅಗತ್ಯವಿಲ್ಲ ಎಂದಿದ್ದಾರೆ.

ಪ್ರಜ್ವಲ್ ಮೇಲೆ ಆರೋಪ ಬಂದಾಗಲೇ ಪಕ್ಷದಿಂದ ಅವರನ್ನು ಅಮಾನತು ಮಾಡಲಾಗಿತ್ತು. ನಮ್ಮ ಪಕ್ಷದ ವರಿಷ್ಠರು ಪಕ್ಷದಿಂದ ಅವರನ್ನು ಅಮಾನತ್ತು ಮಾಡಿದ್ದರು. ಆಗ ಅಪರಾಧಿಯೋ ಅಲ್ಲವೋ ಎಂಬ ಬಗ್ಗೆ ಇನ್ನೂ ತೀರ್ಪು ಬಂದಿರಲಿಲ್ಲ. ವರಿಷ್ಠರ ತೀರ್ಮಾನದ ಸ್ಪಷ್ಟತೆ ಅರ್ಥಮಾಡಿಕೊಳ್ಳಬೇಕಾಗುತ್ತದೆ. ಇದಕ್ಕಿಂತ ಹೆಚ್ಚಾಗಿ ಈ ವಿಷಯದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ ಎಂದು ತಿಳಿಸಿದ್ದಾರೆ.

Home add -Advt

Related Articles

Back to top button