Latest

ನಿಖಿಲ್ ಕುಮಾರಸ್ವಾಮಿಗೂ ಕೊರೊನಾ ಪಾಸಿಟಿವ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಇದೀಗ ಅವರ ಪುತ್ರ ನಿಖಿಲ್ ಕುಮಾರಸ್ವಾಮಿಗೂ ಕೊರೊನಾ ಪಾಸಿಟಿವ್ ಬಂದಿದೆ.

ಈ ಕುರಿತು ಟ್ವೀಟ್ ಮಾಡಿರುವ ನಿಖಿಲ್, ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.

ಇಂದು ಬೆಳಿಗ್ಗೆಯಷ್ಟೇ ಮಾಜಿ ಸಿಎಂ ಕುಮಾರಸ್ವಾಮಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಈಗ ಅವರ ಪುತ್ರ ನಿಖಿಲ್ ಗೂ ಸೋಂಕು ತಗುಲಿದೆ.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಕೊರೊನಾ ಸೋಂಕು

Home add -Advt

Related Articles

Back to top button