Karnataka NewsPolitics

*ನಿಖಿಲ್ ಕುಮಾರಸ್ವಾಮಿ ಸೋಲು: ನೊಂದ ಅಭಿಮಾನಿ ಆತ್ಮಹತ್ಯೆಗೆ ಯತ್ನ*

ಪ್ರಗತಿವಾಹಿನಿ ಸುದ್ದಿ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿದ್ದ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ನೊಂದ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ನಿಖಿಲ್ ಕುಮಾರಸ್ವಾಮಿ ಮೂರನೇ ಬಾರಿ ಚುನಾವಣೆಯಲ್ಲಿ ಸೋಲನುಭವಿಸುತ್ತಿದ್ದಾರೆ. ಈ ಬಾರಿ ಚನ್ನಪಟ್ಟಣದಲ್ಲಿ ನಿಖಿಲ್ ಗೆಲ್ಲುವ ನಿರೀಕ್ಷೆಯಿತ್ತು. ಆದರೆ ಕೊನೇ ಹಂತದಲ್ಲಿ ಈ ಬಾರಿಯೂ ಸೋಲನುಭವಿಸಿರುವುದು ನಿಖಿಲ್ ಅವರಿಗೂ ಆಘಾತ ತಂದಿದೆ. ಇನ್ನು ಪಕ್ಷದ ಕಾರ್ಯಕರ್ತರು ಹಾಗೂ ಅವರ ಭಿಮಾನಿಗಳಿಗೆ ಇದನ್ನು ಅರಗಿಸಿಕೊಳ್ಳಲೂ ಆಗದಷ್ಟು ಬೇಸರತಂದಿದೆ.

ಇದರಿಂದ ಮನನೊಂದ ನಿಖಿಲ್ ಕುಮಾರಸ್ವಾಮಿ ಅಭಿಮಾನಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಚನ್ನಪಟ್ಟಣದ ಕೂಡ್ಲೂರು ಬಳಿಯ ಶ್ರೀರಾಂಪುರ ಗ್ರಾಮದ ಮಂಜುನಾಥ್ ಎಂಬ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದವರು.

Home add -Advt

ತೀವ್ರ ಅಸ್ವಸ್ಥಗೊಂಡಿರುವ ಮಂಜುನಾಥ್ ಅವರನ್ನು ಮಂಡ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾನು ನಿಖಿಲ್ ಅಭಿಮಾನಿ, ನನ್ನ ಸಾವಿಗೆ ನಾನೇ ಕಾರಣ. ಜೈ ಜೆಡಿಎಸ್ ಎಂದು ಪತ್ರ ಬರೆದಿಟ್ಟು ವಿಷ ಸೇವನೆ ಮಾಡಿದ್ದ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Related Articles

Back to top button