
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ, ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಗಂಡು ಮಗುವಿನ ತಂದೆಯಾದ ಸಂಭ್ರಮದಲ್ಲಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ. ಮುದ್ದಾದ ಮಗುವನ್ನು ಎತ್ತಿಕೊಂಡು ನಿಖಿಲ್ ಕುಮಾರಸ್ವಾಮಿ ಫೋಟೋಗೆ ಪೋಸ್ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮೊಮ್ಮಗನಿಗೆ ಮಗುವಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.
ಪವಿತ್ರಾ ಕುರ್ತಕೋಟಿ ಅವರ ಸಾಧನೆಯ ಹಾದಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ