Kannada NewsKarnataka NewsLatestNational

*ನಿಫಾ ವೈರಸ್ ಗೆ ಇಬ್ಬರು ಬಲಿ; ಓರ್ವ ಬಾಲಕನ ಸ್ಥಿತಿ ಗಂಭೀರ; ಕೇರಳದಲ್ಲಿ ಕಟ್ಟೆಚ್ಚರಕ್ಕೆ ಸೂಚನೆ*

ಕರ್ನಾಟಕದಲ್ಲಿಯೂ ಅಲರ್ಟ್ ಘೋಷಣೆ


ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ದೇಶದಲ್ಲಿ ನಿಫಾ ವೈರಸ್ ಭೀತಿ ಹೆಚ್ಚಗಿದೆ. ಕೇರಳದ ಕೋಯಿಕ್ಕೋಡ್ ನಲ್ಲಿ ನಿಫಾ ವೈರಸ್ ಗೆ ಇಬ್ಬರು ಬಲಿಯಾಗಿದ್ದು, ಓರ್ವ ಬಾಲಕನ ಸ್ಥಿತಿ ಗಂಭೀರವಾಗಿದೆ.

ಕೇರಳದಲ್ಲಿ ನಿಫಾ ವೈರಸ್ ಪ್ರಕರಣಗಳು ಹೆಚ್ಚುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೋಯಿಕ್ಕೋಡ್ ನ ಕೆಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೋಯಿಕ್ಕೋಡ್ ನಲ್ಲಿ ನಿಫಾ ವೈರಸ್ ಗೆ 40 ಹಾಗೂ 49 ವರ್ಷದ ಇಬ್ಬರು ಸಾವನ್ನಪ್ಪಿದ್ದಾರೆ. ಅವರ ಸಂಪರ್ಕದಲ್ಲಿದ್ದ 9 ವರ್ಷದ ಬಾಲಕ ಹಾಗು ಇನ್ನೋರ್ವರಿಗೆ ಸೋಂಕು ದೃಢಪಟ್ಟಿದೆ.

ಈ ಇಬ್ಬರು ಸೋಂಕಿತರಲ್ಲಿ ಬಾಲಕನ ಸ್ಥಿತಿ ಗಂಭೀರವಾಗಿದೆ. ಇನ್ನೋರ್ವ ವ್ಯಕ್ತಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಕೇರಳದಲ್ಲಿ ಪ್ರಸ್ತುತ ಪತ್ತೆಯಾಗಿರುವ ನಿಫಾ ವೈರಸ್ ತಳಿ ಬಾಂಗ್ಲಾದೇಶದದಲ್ಲಿ ಕಂಡುಬಂದ ರೂಪಾಂತರ ತಳಿಯಾಗಿದ್ದು, ಅದು ಮನುಷ್ಯನಿಂದ ಮನುಷ್ಯನಿಗೆ ಹರಡುತ್ತದೆ. ಅಲ್ಲದೇ ನಿಫಾ ವೈರಸ್ ಕಡಿಮೆ ಸಾಂಕ್ರಾಮಿಕವಾಗಿದ್ದರೂ ಹೆಚ್ಚಿನ ಮರಣ ಪ್ರಮಾಣವನ್ನು ಹೊಂದಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.

ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ಆರೋಗ್ಯ ಇಲಾಖೆ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, ಚಾಮರಾಜನಗರ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳು ಎಚ್ಚರವಹಿಸುವಂತೆ ಸೂಚಿಸಲಾಗಿದೆ. ಜ್ವರದಂತಹ ಲಕ್ಷಣ ಕಂಡುಬಂದರೆ ರಕ್ತದ ಮಾದರಿ ತಪಾಸಣೆ ಮಾದಲು ಸೂಚಿಸಲಾಗಿದೆ. ಗಡಿ ಜಿಲ್ಲೆಗಳ ಗ್ರಾಮಗಳಲ್ಲಿ ಆಶಾ ಕಾರ್ಯಕರ್ತೆಯರು ಜನರ ಆರೋಗ್ಯದ ಬಗ್ಗೆ ನಿಗಾವಹಿಸಲು ಸೂಚಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button