ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಮೂರನೇ ಅಲೆ ಆತಂಕದ ನಡುವೆಯೇ ಕೇರಳದ ಬೆನ್ನಲ್ಲೇ ಇದೀಗ ರಾಜ್ಯಕ್ಕೂ ನಿಫಾ ವೈರಸ್ ಆತಂಕ ಎದುರಾಗಿದೆ. ನಿಫಾ ವೈರಸ್ ಬಗ್ಗೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಕೇರಳಕ್ಕೆ ಮತ್ತೆ ನಿಫಾ ವೈರಸ್ ಕಂಟಕ ಆರಂಭವಾಗಿದ್ದು, ನಿನ್ನೆ 12 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದ. ಇದರ ಬೆನ್ನಲ್ಲೇ ಹಲವು ನಿಫಾ ಸೋಂಕಿನ ಲಕ್ಷಗಳು ಕಂಡು ಬರುತ್ತಿವೆ. ಬಹುತೇಕ ಕೋವಿಡ್ ಲಕ್ಷಣಗಳನ್ನೇ ಹೊಂದಿರುವ ಈ ಸೋಂಕು ಕೊರೊನಾಗಿಂತಲೂ ಅಪಾಯಕಾರಿಯಾಗಿದ್ದು, ರಾಜ್ಯಕ್ಕೂ ನಿಫಾ ಆತಂಕ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನಿಫಾ ವೈರಸ್ ಬಗ್ಗೆ ತಜ್ಞರಿಂದ ವರದಿ ಸಹ ಕೇಳಿದ್ದು, ವೈರಸ್ ಹರಡದಂತೆ ಕೈಗೊಳ್ಳಬೇಕಾದ ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಕೇರಳ ರಾಜ್ಯದ ಗಡಿ ಜಿಲ್ಲೆಯಾಗಿರುವ ದಕ್ಷಿಣ ಕನ್ನಡದಲ್ಲಿ ನಿಫಾ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಕಟ್ಟೆಚ್ಚರಕ್ಕೆ ಜಿಲ್ಲಾಡಳಿತ ಸೂಚಿಸಿದೆ ಎಂದು ಹೇಳಿದರು.
ಕಾನೂನು ಮಾಪನ ಶಾಸ್ತ್ರ ಇಲಾಖೆ ಮಹಿಳಾ ಅಧಿಕಾರಿ ಅಮಾನತು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ