Kannada NewsKarnataka News

ನಿಪ್ಪಾಣಿ : ಕ್ಷೇತ್ರದ ಹಿತಕ್ಕಾಗಿ ನಿಮ್ಮ ಆಯ್ಕೆ ಬಿಜೆಪಿಯೇ ಆಗಿರಲಿ – ಬಸವಪ್ರಸಾದ ಜೊಲ್ಲೆ


ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ: ಮುಂದಿನ ದಿನಗಳಲ್ಲಿ ಸ್ಥಳೀಯ ಮತಕ್ಷೇತ್ರವನ್ನು ಸಚಿವೆ ಶಶಿಕಲಾ ಜೊಲ್ಲೆ ರಾಜ್ಯದಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುವ ಗುರಿ ಹೊಂದಿದ್ದಾರೆ. ಚುನಾವಣೆಯಲ್ಲಿ ಅವರನ್ನು ಭರ್ಜರಿ ಮತಗಳೊಂದಿಗೆ ಗೆಲ್ಲಿಸಿ’ ಎಂದು ಬಸವಜ್ಯೋತಿ ಯೂಥ್ ಫೌಂಡೇಶನ್ ಅಧ್ಯಕ್ಷ್ಯ ಬಸವಪ್ರಸಾದ ಜೊಲ್ಲೆ ಹೇಳಿದರು.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸ್ಥಳೀಯ ವಿಧಾನಸಭಾ ಕ್ಷೇತ್ರದ ಗಳತಗಾ, ದಿಲಾಲಪೂರವಾಡಿ, ಭಿಮಾಪೂರವಾಡಿ ಹಾಗೂ ಕೊಗನೋಳಿ ಗ್ರಾಮದಲ್ಲಿ ಬಸವಜ್ಯೋತಿ ಯೂಥ್ ಫೌಂಡೇಶನ್ ಅಧ್ಯಕ್ಷ್ಯ ಬಸವಪ್ರಸಾದ ಜೊಲ್ಲೆ ಮನೆ ಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ ಶಶಿಕಲಾ ಜೊಲ್ಲೆಯವರ ಪರವಾಗಿ ಮತಯಾಚಿಸಿ ಅವರು ಮಾತನಾಡಿದರು.

ಸಚಿವೆ ಜೊಲ್ಲೆಯವರು ಮಾಡಿರುವ ಅಭಿವೃದ್ಧಿ ಕಾರ್ಯಗಳ ಮಾಹಿತಿ ನೀಡಿ, ಕ್ಷೇತ್ರದಲ್ಲಿ ಮುಂದೆಯೂ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿರಲು ಕಮಲದ ಗುರುತಿಗೆ ಮತ ನೀಡಿ, ಆಶೀರ್ವದಿಸಿ ಎಂದು ಮನವಿ ಮಾಡಿದರು.
’ಸಚಿವೆ ಶಶಿಕಲಾ ಜೊಲ್ಲೆಯವರು ಕ್ಷೇತ್ರದಲ್ಲಿ ಅಭಿವೃದ್ಧಿಯೊಂದಿಗೆ ಕ್ರೀಡೆ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಗಳನ್ನು ಮಾಡಿದ್ದಾರೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಯೊಂದಿಗೆ ಹಲವಾರು ರೂಪುರೇಶೆಗಳನ್ನು ಅವರು ಸಿದ್ಧಪಡಿಸಿದ್ದು ಎಲ್ಲರೂ ಸಹಕರಿಸಿ ಅವರಿಗೆ ಅವಕಾಶ ಕಲ್ಪಿಸಬೇಕು’ ಎಂದರು.
ಈ ಸಂದರ್ಭದಲ್ಲಿ ಭರತ ನಸಲಾಪುರೆ, ಶಿವಾನಂದ ಗಿಂಡೆ, ಶ್ರೀಕಾಂತ ಬನ್ನೆ, ವಿಜಯ ತೆಲವೇಕರ, ಶಿವಾನಂದ ಖೋತ, ರಾಜು ಉಪಾಧ್ಯೆ, ಲಕ್ಷ್ಮಣ ಶಿಪ್ಪುರೆ, ಲಕ್ಷ್ಮಣ ಕೋಟೆ, ಸುರೇಶ ಕೋಟೆ, ಮೊದಲಾದವರು ಸೇರಿದಂತೆ ಪಕ್ಷದ ಕಾರ್ಯಕರ್ತರು ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


ಕ್ಷೇತ್ರದ ಜನರ ಆಶಿರ್ವಾದ ನನ್ನ ಮೇಲಿದೆ – ಸಚಿವೆ ಶಶಿಕಲಾ ಜೊಲ್ಲೆ
x

ನಿಪ್ಪಾಣಿ ತಾಲೂಕಿನ ಗೊಂದುಗುಪ್ಪಿ ಗ್ರಾಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಬಿರುಸಿನ ಪ್ರಚಾರ ಕೈಗೊಂಡರು. ಮಲಗೊಂಡಾ ಪಾಟೀಲ, ಸರ್ಜೇರಾವ ಪಾಟೀಲ, ಆನಂದರಾವ ಪಾಟೀಲ, ಬಾಜಿರಾವ ಭೋಸಲೆ, ಮತ್ತಿತರರು ಇದ್ದಾರೆ.


ನಿಪ್ಪಾಣಿ: ’ಕಳೆದ ಎರಡು ಬಾರಿಯ ಅವಧಿಯಲ್ಲಿ ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗೆ ಶ್ರಮಿಸಿದ್ದು, ಜನಸಾಮಾನ್ಯರ ಬೇಡಿಕೆಗಳಿಗೆ ಸೂಕ್ತವಾಗಿ ಸ್ಪಂದಿಸಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಜನರ ಆಶೀರ್ವಾದ ಸದಾ ನನ್ನ ಮೇಲಿದೆ’ ಎಂದು ಸ್ಥಳೀಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ತಾಲೂಕಿನ ಹಣಬರವಾಡಿ, ದತ್ತವಾಡಿ, ಶೆಂಡೂರ, ಗೊಂದಿಕೊಪ್ಪಿ ಗ್ರಾಮದಲ್ಲಿ ಬುಧವಾರ ಚುನಾವಣಾ ಪ್ರಚಾರ ಕೈಗೊಂಡು ಅವರು ಮಾತನಾಡಿದರು. ’ಕಳೆದ ಎರಡು ಬಾರಿ ಶಾಸಕಿಯಾಗಿ ಆಯ್ಕೆ ಮಾಡುವ ಮೂಲಕ ಕ್ಷೇತ್ರದಲ್ಲಿ ಆಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುವ ಸದವಕಾಶ ನೀಡಿದ್ದೀರಿ. ಕ್ಷೇತ್ರದ ಮತದಾರರು ನನ್ನ ಮೇಲಿಟ್ಟ ಭರವಸೆಯನ್ನು ನಾನು ಉಳಿಸಿಕೊಂಡಿದ್ದೇನೆ. ಕಳೆದ ೧೦ ವರ್ಷಗಳಲ್ಲಿ ಸುಮಾರು ೨ ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಜನಸಾಮಾನ್ಯರ ಬೇಡಿಕೆಗಳಿಗೆ ಸೂಕ್ತವಾಗಿ ಸ್ಪಂದಿಸಿದ್ದು, ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಈ ಎಲ್ಲಾ ಕಾರ್ಯಗಳ ಹಿನ್ನಲೆಯಲ್ಲಿ ಕ್ಷೇತ್ರದ ಮತದಾರರು ಮತ್ತೊಮ್ಮೆ ಆಶೀರ್ವದಿಸಲಿದ್ದಾರೆ’ ಎಂದು ಹೇಳಿದರು.
ಕ್ಷೇತ್ರದ ಬಿಜೆಪಿ ಪ್ರಮುಖರು ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಅಭ್ಯರ್ಥಿ ಶಶಿಕಲಾ ಜೊಲ್ಲೆ ಅವರಿಗೆ ಸಾಥ್ ನೀಡಿದರು. ಈ ಸಂದರ್ಭದಲ್ಲಿ ಹಾಲಶುರ್ ಕಾರ್ಖಾನೆಯ ಉಪಕಾರ್ಯಾಧ್ಯಕ್ಷ ಮಲಗೊಂಡಾ ಪಾಟೀಲ ಸಿದ್ದು ನರಾಟೆ, ಸರ್ಜೇರಾವ ಪಾಟೀಲ, ಆನಂದರಾವ ಪಾಟೀಲ, ಬಾಜಿರಾವ ಭೋಸಲೆ, ಪಾಂಡುರಂಗ ಪಾಟೀಲ, ಮಹಾದೇವ ಸುತಾರ, ಗಣಪತಿ ಚೌಗುಲೆ, ಆತ್ಮಾರಾಮ ಚೌಗಲೆ, ಸಂತೋಷ ನಾಯಿಕ, ಪ್ರವೀಣ ಗಿರಿ, ಮೊದಲಾದವರು ಸೇರಿದಂತೆ ಪಕ್ಷದ ಕಾರ್ಯಕರ್ತರು ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

https://pragati.taskdun.com/pm-narendramodibjpsamvadacongress/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button