Belagavi NewsBelgaum News

*ನಿಪ್ಪಾಣಿ RTO ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಆರ್‌ಟಿಓ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

Home add -Advt

ನಿಪ್ಪಾಣಿಯ ಕೊಗನೊಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರ ಬಳಿಯ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಲೋಕಾಯುಕ್ತ ಎಸ್‌ಪಿ ಹನುಮಂತರಾಯ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಅನೇಕ ಅನಧಿಕೃತ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಆರ್ ಟಿ ಓ ದಲ್ಲಾಳಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಲಾರಿ ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದ ಬಗ್ಗೆ ದೂರಿನ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button