Belagavi NewsBelgaum NewsKannada NewsKarnataka NewsNationalPolitics

ರಾಜೀನಾಮೆ ನೀಡಲು ಸಿದ್ದ ಎಂದ ರಾಜು ಕಾಗೆ 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪಂಚಮಸಾಲಿ ಸಮುದಾಯದ 2ಎ ಮೀಸಲಾತಿಗಾಗಿ ರಾಜೀನಾಮೆಗೂ ಸಿದ್ಧ ಎಂದು ಕಾಗವಾಡದ ಶಾಸಕ ಹಾಗೂ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ರಾಜು ಕಾಗೆ ಹೇಳಿಕೆ ನೀಡಿದ್ದಾರೆ.

ಪಂಚಮಸಾಲಿ 2ಎ ಮೀಸಲಾತಿ ವಿವಾದಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಉಗಾರ ಖುರ್ದದಲ್ಲಿ ಸಮುದಾಯಕ್ಕೆ ಮೀಸಲಾತಿ ನೀಡಲು ಆಗ್ರಹಿಸಿದ ರಾಜು ಕಾಗೆ, ಅಧಿಕಾರ ಹೋದರೆ ಹೋಯಿತು. ಸಮಾಜದ ಸಲುವಾಗಿ ಅಧಿಕಾರ ಕಳೆದುಕೊಳ್ಳಲು ಸಿದ್ಧ. ಎಲ್ಲ ಪಂಚಮಸಾಲಿ ಶಾಸಕರು ರಾಜೀನಾಮೆ ನೀಡಲಿ ಎಂದು ಹೇಳಿದ್ದಾರೆ.

Home add -Advt

ಲಿಂಗಾಯತ ಪಂಚಮಸಾಲಿ ಸಮುದಾಯದ ಎಲ್ಲ ಪಕ್ಷದ ಶಾಸಕರು ಪಕ್ಷಾತೀತವಾಗಿ 2ಎ ಮೀಸಲಾತಿಗಾಗಿ ರಾಜೀನಾಮೆ ನೀಡಿದರೆ ಯಾವುದೇ ಸರ್ಕಾರ ಆದರೂ ಮಂಡಿಯೂರಲೇ ಬೇಕು. ಹೀಗಾಗಿ ಮೀಸಲಾತಿಗಾಗಿ ನಾನು ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ರಾಜೀನಾಮೆಯ ಎಚ್ಚರಿಕೆ ನೀಡಿದ್ದಾರೆ. 

Related Articles

Back to top button