*ಬೆಳಗಾವಿ: ರಾಮ ಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಪತ್ರ*

ಜಿಲ್ಲೆಯಲ್ಲಿ ಹೈ ಅಲರ್ಟ್
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಶ್ರೀ ರಾಮ ಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಪತ್ರ ಬರೆಯಲಾಗಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿಪ್ಪಾಣಿ ಪಟ್ಟಣದ ಶ್ರೀರಾಮ ಮಂದಿರವನ್ನು ಸ್ಫೋಟಿಸುತ್ತೇವೆ. ಸುಧಾರಿಸಿಕೊಳ್ಳಿ ಎಂದು ಅಲ್ಲಾ ಹು ಅಕ್ಬರ್ ಹೆಸರಲ್ಲಿ ದುಷ್ಕರ್ಮಿಗಳು ಬೆದರಿಕೆ ಪತ್ರ ಬರೆದಿದ್ದಾರೆ.
ಫೆ.7 ಹಾಗೂ 28ರಂದು ಎರಡು ಪತ್ರಗಳು ಬಂದಿವೆ. ಮುಂದಿನ 20, 21ನೇ ತಾರೀಖಿನ ಒಳಗಡೆ ರಾಮ ಮಂದಿರವನ್ನು ದೊಡ್ಡಪ್ರಮಾಣದಲ್ಲಿ ಸ್ಫೋಟಿಸುವುದಾಗಿ ಅನಾಮಧೇಯ ವ್ಯಕ್ತಿಗಳು ಪತ್ರ ಬರೆದಿದ್ದು, ದುಷ್ಕರ್ಮಿಗಳ ಈ ಪತ್ರ ಆತಂಕಸೃಷ್ಟಿಸಿದೆ.
ಮೊದಲನೇಯ ಪತ್ರ ರಾಮ ಮಂದಿರದ ಗರ್ಭಗುಡಿಯಲ್ಲಿ ಪತ್ತೆಯಾಗಿದೆ. ಎರಡನೇ ಪತ್ರ ರಾಮ ಮಂದಿರದ ಆವರಣದಲ್ಲಿನ ಹನುಮಾನ್ ಮಂಡಿರದಲ್ಲಿ ಪತ್ತೆಯಾಗಿದೆ. ಬೆದರಿಕೆ ಪತ್ರ ಬಂದಿರುವ ಬೆನ್ನಲ್ಲೇ ಬೆಳಗವೈ ಜಿಲ್ಲಾ ಪೊಲೀಸ್ ಹೈ ಅಲರ್ಟ್ ಆಗಿದ್ದು, ರಾಮ ಮಂದಿರ ಆವರಣದಲ್ಲಿ 14 ಸಿಸಿ ಕ್ಯಾಮರಾಗಳನ್ನು ಅಳವಡಿಸಿದ್ದಾರೆ. ಒಂದು ಡಿಆರ್ ಪೊಲೀಸ್ ತುಕಡಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ