
ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ – ನಿಪ್ಪಾಣಿ ಪೊಲೀಸರು ದಾಳಿ ನಡೆಸಿ 10 ಸಾವಿರ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.
ನಿಪ್ಪಾಣಿ ಪಟ್ಟಣದ ಯರನಾಳ ರಸ್ತೆಯಲ್ಲಿ ಮಾರಾಟ ಮಾಡುತ್ತಿದ್ದ 1237 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಸೋಹೆಲ್ ದೇಸಾಯಿ ಮತ್ತು ಹಮೀದ್ ಮಹತ್ ಎನ್ನುವವರನ್ನು ಬಂಧಿಸಲಾಗಿದ್ದು, ಇನ್ನೋರ್ವ ನಾಪತ್ತೆಯಾಗಿದ್ದಾನೆ. ಬಂಧಿತರಿಂದ 2,500 ರೂ. ನಗದ ವಶಪಡಿಸಿಕೊಳ್ಳಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ