ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನಿರ್ಭಯಾ ಗ್ಯಾಂಗ್ ರೇಪ್ ಹಾಗೂ ಹತ್ಯೆ ಪ್ರಕರಣದ ಅಪರಾಧಿಗಳಿಗೆ ನಾಳೆ ಗಲ್ಲುಶಿಕ್ಷೆ ಜಾರಿಯಿಲ್ಲ ಎಂದು ಪಟಿಯಾಲಾ ಹೌಸ್ ನ್ಯಾಯಾಲಯ ಆದೇಶ ಹೊರಡಿಸಿದೆ.
ಅಪರಾಧಿಗಳಲ್ಲಿ ಒಬ್ಬನಾದ ಪವನ್ ಗುಪ್ತಾ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಆತ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದ. ಆರ್ಜಿ ವಿಚಾರ ಈಗ ರಾಷ್ಟ್ರಪತಿಗಳ ಮುಂದಿರುವುದರಿಂದ ಅಪರಾಧಿಗಳಿಗೆ ಗಲ್ಲುಶಿಕ್ಷೆ ಜಾರಿ ಮತ್ತೆ ವಿಳಂಬವಾಗಲಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಮತ್ತೆ ಹೊಸ ಡೆತ್ ವಾರೆಂಟ್ ಜಾರಿ ಮಾಡಲಿದೆ.
ಈ ಹಿಂದೆ ಮಾ. 3ರಂದು ಗಲ್ಲು ಶಿಕ್ಷೆ ಜಾರಿಗೆ ದಿನಾಂಕ ನಿಗದಿಯಾಗಿತ್ತು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಈಗಾಗಲೇ ಉಳಿದ ಮೂವರ ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದು, ಇದೀಗ ಪವನ್ ಗುಪ್ತಾ ಅರ್ಜಿಯ ಕುರಿತು ತೆಗೆದುಕೊಳ್ಳುವ ನಿರ್ಣಯದ ಮೇಲೆ ಹೊಸ ಡೆತ್ ವಾರೆಂಟ್ ದಿನಾಂಕ ನಿಗದಿಯಾಗಲಿದೆ. ಈ ಹಿನ್ನಲೆಯಲ್ಲಿ ಹಿಂದೆ ಹೊರಡಿಸಿದ್ದ ಡೆತ್ ವಾರೆಂಟ್ ಗೆ ತಡೆಯಾಜ್ನೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ