ನಿರ್ಭಯಾ ಅಪರಾಧಿಗಳಿಗೆ ಹೊಸ ಡೆತ್ ವಾರೆಂಟ್ ಜಾರಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನಿರ್ಭಯಾ ಗ್ಯಾಂಗ್ ರೇಪ್ ಹಾಗೂ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ದೆಹಲಿ ಪಟಿಯಾಲಾ ಹೌಸ್ ಕೋರ್ಟ್  ಹೊಸದಾಗಿ ಡೆತ್ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿದೆ.

ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಜನವರಿ 22, ಬೆಳಗ್ಗೆ 7ಗಂಟೆಗೆ ಗಲ್ಲುಶಿಕ್ಷೆ ವಿಧಿಸುವಂತೆ ದೆಹಲಿ ಹೈಕೋರ್ಟ್ ತೀರ್ಪು ನೀಡಿತ್ತು. ಆದರೆ ಇಬ್ಬರು ಅಪರಾಧಿಗಳಾದ ವಿನಯ್ ಹಾಗೂ ಮುಕೇಶ್ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಮಂಗಳವಾರ ಸುಪ್ರೀಂ ನ್ಯಾಯಪೀಠ ವಜಾಮಾಡಿ ಗಲ್ಲುಶಿಕ್ಷೆ ಖಚಿತಪಡಿಸಿತ್ತು. ಅದಾದ ಬಳಿಕ ಮುಕೇಶ್ ಎಂಬ ಅಪರಾಧಿ ಮತ್ತೆ ಕ್ಷಮಾದಾನ ಕೋರಿ ದೆಹಲಿ ಲೆ.ಗವರ್ನರ್ ಗೆ ಅರ್ಜಿ ಸಲ್ಲಿಸಿದ್ದ. ಈ ಅರ್ಜಿಯನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಲಾಗಿತ್ತು. ಕೇಂದ್ರ ಗೃಹ ಸಚಿವಾಲಯ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕಳುಹಿಸಿ, ಕ್ಷಮಾದಾನ ಅರ್ಜಿ ತಿರಸ್ಕರಿಸುವಂತೆ ಶಿಫಾರಸು ಮಾಡಿತ್ತು.

ಇದರ ಬೆನ್ನಲ್ಲೇ ದೋಷಿ ಮುಕೇಶ್ ಸಿಂಗ್ ಸಲ್ಲಿಸಿದ್ದ ದಯಾ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದರು. ನಿರ್ಭಯಾ ಪ್ರಕರಣದ ಅಪರಾಧಿಗಳ ಗಲ್ಲುಶಿಕ್ಷೆಗೆ ವಿಳಂಬವಾಗುತ್ತಿರುವ ಬೆನ್ನಲ್ಲೇ ಇದೀಗ ದೆಹಲಿ ಹೈಕೋರ್ಟ್ ಹೊಸದಾಗಿ ಡೆತ್ ವಾರೆಂಟ್ ಜಾರಿ ಮಾಡಿದ್ದು, ಫೆ.1ರಂದು ಗಲ್ಲುಶಿಕ್ಷೆ ವಿಧಿಸುವಂತೆ ಆದೇಶ ನೀಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button