ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಿರ್ಭಯಾ ಸೇಫ್ ಸಿಟಿ ಪ್ರಾಜೆಕ್ಟ್ ಟೆಂಡರ್ ಪ್ರಕರಣ ಗೃಹ ಕಾರ್ಯದರ್ಶಿ ಡಿ.ರೂಪಾ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ನಡುವಿನ ಸಮರಕ್ಕೆ ಕಾರಣವಾಗಿದೆ.
ಸೇಫ್ ಸಿಟಿ ಟೆಂಡರ್ ಕುರಿತಾಗಿ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ ಡಿ.ರೂಪಾ, ಹೇಮಂತ್ ನಿಂಬಾಳ್ಕರ್, 1067 ಕೋಟಿ ಟೆಂಡರ್ ನಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ. ಈ ಟೆಂಡರ್ ನಲ್ಲಿ ಅನೇಕ ಅಕ್ರಮಗಳು ನಡೆದಿವೆ.ಸರ್ಕಾರಕ್ಕೆ ತಪ್ಪು ಮಾಹಿತಿ ಸಲ್ಲಿಸಲಾಗುತ್ತಿದೆ. ನಿಂಬಾಳ್ಕರ್ ಸರ್ಕಾರದ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
4,500 ಕೋಟಿ ಐಎಂಎ ಕಂಪನಿ ಹಗರಣದಲ್ಲಿ ಹೇಮಂತ್ ನಿಂಬಾಳ್ಕರ್ ವಿರುದ್ಧ ಆರೋಪವಿದೆ, ಈ ಬಗ್ಗೆ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ. ಈಗ ನಿರ್ಭಯಾ ಸೇಫ್ ಸಿಟಿ ಯೋಜನೆಯಲ್ಲಿ ಹೇಮಂತ್ ನಿಮ್ಬಾಳ್ಕರ್ ವಹಿಸಿರುವ ಪಾತ್ರದ ಬಗ್ಗೆ ಹಲವು ಅನುಮಾನಗಳಿದ್ದು, ಈ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿದ್ದ ಹೇಮಂತ್ ನಿಂಬಾಳ್ಕರ್, 619 ಕೋಟಿ ನಿರ್ಭಯಾ ಸೇಫ್ ಸಿಟಿ ಟೆಂಡರ್ ಬಿಡ್ದಿಂಗ್ ಪಾರದರ್ಶಕವಾಗಿದ್ದು, ಯಾವುದೇ ಗೊಂದಲಗಳಿಲ್ಲ ಎಂದು ತಿಳಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ