Karnataka News

*ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವು*

ಪ್ರಗತಿವಾಹಿನಿ ಸುದ್ದಿ: ಮನೆಯ ಮುಂದಿನ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಜಿ.ಹೊಸಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಅಂಗಡಿ ಮಂಜಣ್ಣ ಎಂಬುವವರ ಪುತ್ರ ಕುಶಾಲ್ (3) ಮೃತ ದುರ್ದೈವಿ.

ಆಕಸ್ಮಿಕವಾಗಿ ಮನೆಯ ಮುಂದಿನ ನೀರಿನ ತೊಟ್ಟಿಗೆ ಬಿದ್ದು ಕುಶಾಲ್ ಸಾವನ್ನಪ್ಪಿದ್ದಾನೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button