ಪ್ರಗತಿವಾಹಿನಿ ಸುದ್ದಿ: ಚುನಾವಣಾ ಬಾಂಡ್ ಹೆಸರಲ್ಲಿ ಸುಲಿಗೆ ಪ್ರಕರಣ ಸಂಬಂಧ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಇತರರ ವಿರುದ್ಧ ದಾಖಲಾಗಿದ್ದ ಎಫ್ ಐರ್ ನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಆದರ್ಶ್ ಅಯ್ಯರ್ ಎನ್ನುವವರು ಚುನಾವಣಾ ಬಾಂಡ್ ಮೂಲಕ ಹಣ ಸುಲಿಗೆ ಮಾಡಲಾಗುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್ ಮತ್ತಿತರರ ವಿರುದ್ಧ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ತಮ್ಮ ವಿರುದ್ಧದ ಎಫ್ ಐ ಆರ್ ರದ್ದು ಕೋರಿ ಬಿಜೆಪಿ ನಾಯಕರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಎಫ್ ಐ ಆರ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಇಡಿ ಮೂಲಕ ದಾಳಿ ಮಾಡುವುದಾಗಿ ಬೆದರಿಸಿ ಪ್ರತಿಷ್ಠಿತ ಕಂಪನಿಗಳಿಂದ ಸುಮಾರು 8 ಸಾವಿರ ಕೋಟಿ ರೂಗಳನ್ನು ಚುನಾವಣಾ ಬಾಂಡ್ ಹೆಸರಲ್ಲಿ ಸುಲಿಗೆ ಮಾಡಲಾಗುತ್ತಿದೆ ಎಂದು ಬಿಜೆಪಿ ನಾಯಕರ ವಿರುದ್ಧ ಆದರ್ಶ್ ಅಯ್ಯರ್ ದೂರು ನೀಡಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ