ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣ ಕಡಿಮೆಯಾಗುತ್ತಿದ್ದು, ದೇಶದ ಆರ್ಥಿಕತೆ ಕೂಡ ಸುಧಾರಣೆಯತ್ತ ಸಾಗಿದೆ. ದೇಶದ ಆರ್ಥಿಕತೆಗೆ ಇನ್ನಷ್ಟು ಪುನಶ್ಚೇತನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆತ್ಮನಿರ್ಭರ ಭಾರತ ಯೋಜನೆಯಡಿ ಮೂರನೇ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಹೊಸ ಉದ್ಯೋಗಗಳ ಸೃಷ್ಟಿಗೆ ಪ್ರೋತ್ಸಾಹ ನೀಡಲು ಕೇಂದ್ರ ಸರ್ಕಾರ ಆತ್ಮನಿರ್ಭರ ಭಾರತ್ ರೋಜ್ ಗಾರ್ ಯೋಜನೆಯನ್ನು ಘೋಷಿಸಿದೆ. ಹೊಸ ಉದ್ಯೋಗ ಸೃಷ್ಟಿಗೆ ಇದು ಸಹಾಯಕಾರಿಯಾಗಲಿದ್ದು, ಉದ್ಯೋಗಿಗಳಿಗೆ ಎರಡು ವರ್ಷದ ವರೆಗೆ ಪಿಎಫ್ ಸಬ್ಸಿಡಿ ಕೂಡ ಈ ಯೋಜನೆಯಲ್ಲಿ ನೀಡಲಾಗುತ್ತದೆ ಎಂದರು.
ಒಂದು ರಾಷ್ಟ್ರ, ಒಂದು ರೇಷನ್ ಕಾರ್ಡ ಯೋಜನೆಯನ್ನು ದೇಶದ 28 ರಾಜ್ಯಗಳಲ್ಲಿ ಜಾರಿಗೆ ಬಂದಿದ್ದು,68.8 ಕೋಟಿ ಫಲಾನುಭವಿಗಳನ್ನು ಒಳಗೊಂಡಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ 2.5 ಕೋಟಿ ರೈತರಿಗೆ ಕೃಷಿ ಚಟುವಟಿಕೆಗಳಲ್ಲಿ ತೊಡಗಲು 1,43,262 ಕೋಟಿ ಹಣ ನೀಡಲಾಗಿದೆ. ಪಿಎಂ ಆವಾಜ್ ಯೋಜನೆಯಡಿ 18 ಸಾವಿರ ಕೋಟಿ ಹೆಚ್ಚುವರಿ ಹಣ ಬಿಡುಗಡೆ ಮಾಡಲಾಗಿದ್ದು, ನಗರ ಪ್ರದೇಶ ಜನರಿಗೆ ಇದರಿಂದ ಅನುಕೂಲವಾಗಲಿದೆ. 78 ಲಕ್ಷ ಉದ್ಯೋಗ ಸೃಷ್ಟಿ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ