
ಪ್ರವಾಹ ಪರಿಶೀಲನೆಗೆ ನಾಳೆ ನಿರ್ಮಲಾ ಸೀತಾರಾಮನ್, ಕುಮಾರಸ್ವಾಮಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಬೆಳಗಾವಿ ಹಾಗೂ ಬಾಗಲಕೋಟೆಗೆ ಆಗಮಿಸಲಿದ್ದಾರೆ.
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ವಿಮಾನದ ಮೂಲಕ ಹೊರಟು ಬೆಂಗಳೂರಿಗೆ ಆಗಮಿಸಿ ಅಲ್ಲಿಂದ 10.15ಕ್ಕೆ ಬೆಂಗಳೂರು ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವರು.
ನಂತರ ಬೆಳಗಾವಿ ನಗರದಲ್ಲಿ ಪ್ರವಾಹ ಪರಿಸ್ಥಿತಿ ಅವಲೋಕನ ನಡೆಸುವ ಅವರು ನಿರಾಶ್ರಿತರ ಕೇಂದ್ರಗಳನ್ನೂ ಪರಿಶೀಲಿಸುವರು. ನಂತರ ಸಂಕೇಶ್ವರಕ್ಕೆ ತೆರಳಿ ಹಿರಣ್ಯಕೇಶಿ ಮತ್ತು ಘಟಪ್ರಭಾ ನದಿ ಪ್ರವಾಹವನ್ನೂ ಪರಿಶೀಲಿಸಲಿದ್ದಾರೆ.
ಮತ್ತೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ಬಾಗಲಕೋಟೆ ಜಿಲ್ಲೆಯ ಪ್ರವಾಹ ಪರಿಶೀಲನೆಗೆ ತೆರಳಲಿದ್ದಾರೆ.
ಕುಮಾರಸ್ವಾಮಿ ಆಗಮನ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶನಿವಾರ ವಿಶೇಷ ವಿಮಾನದಲ್ಲಿ ಬೆಳಗ್ಗೆ 9 ಗಂಟೆಗೆ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿ ನಗರ, ಸಂಕೇಶ್ವರ ಹಾಗೂ ಚಿಕ್ಕೋಡಿಯಲ್ಲಿ ಪ್ರವಾಹ ಪರಿಸ್ಥಿತಿ ಅವಲೋಕನ ನಡೆಸುವ ಅವರು ನಂತರ ಬೆಳಗಾವಿಗೆ ಆಗಮಿಸಿ, ಸಾಂಬ್ರಾ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ತೆರಳಿ ಧಾರವಾಡ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಅವಲೋಕನ ನಡೆಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ