Kannada NewsLatest

*ಬೆಳಗಾವಿ: ಲವ್ ಜಿಹಾದ್ ಗೆ ಯುವತಿ ಬಲಿ?*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಲವ್ ಜಿಹಾದ್ ಗೆ ಯುವತಿಯೊಬ್ಬಳು ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಮದುವೆಯಾಗುವುದಾಗಿ ನಂಬಿಸಿ ಪ್ರೇಮಿ ಕೈಕೊಟ್ಟ ಕಾರಣಕ್ಕೆ ಮನ ನೊಂದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾವಂಶಿ ಗ್ರಾಮದಲ್ಲಿ ನಡೆದಿದೆ.

21 ವರ್ಷದ ತೇಜಸ್ವಿನಿ ಗಂಗಪ್ಪ ಗುಜ್ಜರ್ ಆತ್ಮಹತ್ಯೆ ಮಾಡಿಕೊಂಡ ಯುವತಿ. ಆಸಿಫ್ ದೇಸಾಯಿ ಎಂಬಾತ ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಮೋಸಮಾಡಿದ್ದ ಎನ್ನಲಾಗಿದೆ. ಇದರಿಂದ ನೊಂದ ಯುವತಿ ಮನೆಯಲ್ಲಿ ಕ್ರಿಮಿನಾಷಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Home add -Advt

ತೇಜಸ್ವಿನಿ ಹಾಗೂ ಆಸಿಫ್ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಮದುವೆಯಾಗುವುದಾಗಿ ಹೇಳಿ ಆಸಿಫ್ ಕೈಕೊಟ್ಟಿದ್ದ. ಕೆಲ ದಿನಗಳಿಂದ ಆಸಿಫ್ ಮದುವೆ ನಿರಾಕರಿಸಿದ್ದ. ನೊಂದ ತೇಜಸ್ವಿನಿ ಕ್ರಿಮಿನಾಷಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಗಳ ಸಾವಿಗೆ ಆಸಿಫ್ ದೇಸಾಯಿ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.

ಆಸಿಫ್ ಈ ಹಿಂದೆ ಕೊಲೆಯತ್ನ ಕೇಸ್ ನಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಬಂದಿದ್ದ ಎಂದು ಹೇಳಲಾಗುತ್ತಿದೆ. ತೇಜಸ್ವಿನಿ ಪೋಷಕರು ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

*ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಸಿಕ್ಕ ಕೊಡುಗೆಗಳೇನು? ಸಿಎಂ ಹೇಳಿದ್ದೇನು?*

https://pragati.taskdun.com/union-budget-2023cm-basavaraj-bommaiupper-bhadra-projectpressmeet/

Related Articles

Back to top button