ಪ್ರಗತಿವಾಹಿನಿ ಸುದ್ದಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಬರದಿಂದ ಸಾಗಿದೆ. ಶಿಗ್ಗಂವಿ, ಚನ್ನಪಟ್ಟಣ, ಸಂಡೂರು ಕ್ಷೇತ್ರಗಳಲ್ಲಿ ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಆದರೆ ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವರ್ ನಾನು ಮತದಾನ ಮಾಡಲ್ಲ ಎಂದು ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.
ಮೊದಲಿನಿಂದಲೂ ನಿಶಾ ಯೋಗೇಶ್ವರ್, ತನ್ನ ತಂದೆ ಸಿ.ಪಿ.ಯೋಗೇಶ್ವರ್ ವಿರುದ್ಧ ಆರೋಪಗಳನ್ನು ಮಾಡುತ್ತಲ್ಲೇ ಬಂದಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಲಲ್ಲಿಯೂ ತನ್ನ ತಂದೆ ವಿರುದ್ಧ ಸಿಡಿದೆದ್ದಿದ್ದು, ಬಹಿರಂಗವಾಗಿ ಅಸಮಾಧಾನ ಹೊರ ಹಾಕುತ್ತಿದ್ದರು. ಇಂದು ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ನಡೆಯುತ್ತಿದ್ದು, ಚಕ್ಕೆರೆ ಗ್ರಾಮದಲ್ಲಿ ಮತದಾನದ ಹಕ್ಕು ಹೊಂದಿರುವ ನಿಶಾ ಯೋಗೇಶ್ವರ್, ಚಕ್ಕರೆಯಲ್ಲಿ ಮತ ಚಲಾಯಿಸಬೇಕಿತ್ತು. ಆದರೆ ಸುದ್ದಿಗಾರರೊಂದಿಗೆ ಮಾತನಾಡಿರುವ ನಿಶಾ, ತಾನು ಮತದಾನ ಮಾಡಲ್ಲ. ನನ್ನ ಎಲ್ಲಾ ಹಕ್ಕುಗಳನ್ನು ಕಿತ್ತುಕೊಂಡಿದ್ದಾರೆ,. ಮೂಲಭೂತ ಹಕ್ಕುಗಳನ್ನೇ ನನ್ನಿಂದ ಕಿತ್ತುಕೊಂಡಿರುವಾಗ ಇನ್ನು ಯಾವ ಹಕ್ಕಿಗಾಗಿ ನಾನು ಮತದಾನ ಮಾಡಲಿ? ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಎರಡುಮೂರು ದಿನಗಳಿಂದ ನನ್ನ ಫೇಸ್ ಬುಕ್, ಇನ್ ಸ್ಟಾಗ್ರಾಂ ಪೇಜ್ ಗಳನ್ನು ಹ್ಯಾಕ್ ಮಾಡಲಾಗಿದೆ. ಸಾಮಾಜಿಕ ಜಾಲತಾಣಗಳನ್ನು ಡಿಸ್ ಕನೆಕ್ಟ್ ಮಾಡಿಸಿದ್ದಾರೆ. ನಾನು ಯಾರನ್ನೂ ಸಂಪರ್ಕ ಮಾಡಲು ಆಗುತ್ತಿಲ್ಲ ಎಂದಿದ್ದಾರೆ.
ನನಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇದೆ. ಆದರೆ ಕೆಲ ವ್ಯಕ್ತಿಗಳ ಮೇಲೆ ನಂಬಿಕೆ ಇಲ್ಲ ಎಂದು ತಂದೆ ವಿರುದ್ಧ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ