NationalPolitics

*ನೀತಿ ಆಯೋಗ ಮೀಟಿಂಗ್: ಪ್ರತಿಭಟಿಸಿ ಸಭೆಯಿಂದ ಎದ್ದು ಹೊರ ನಡೆದ ಮಮತಾ ಬ್ಯಾನರ್ಜಿ*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುತ್ತಿರುವ ನೀತಿ ಆಯೋಗದ ಸಭೆಯಿಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎದ್ದು ಹೊರ ನಡೆದ ಘಟನೆ ನಡೆದಿದೆ.

ನವದೆಹಲಿಯಲ್ಲಿ ನೀತಿ ಆಯೋಗದ ಸಭೆ ನಡೆಯುತ್ತಿದೆ. ವಿಪಕ್ಷಗಳ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮಾತ್ರ ಪಾಲ್ಗೊಂಡಿದ್ದರು. ಸಭೆಯ ವೇಳೆ ಸಿಎಂ ಮಮತಾ ಬ್ಯಾನರ್ಜಿ ಮಾತನಾಡುತ್ತಿದ್ದಾಗ ಮೈಕ್ ಮ್ಯೂಟ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಆಕ್ರೋಶಗೊಂದ ಮಮತಾ ಬ್ಯಾನರ್ಜಿ ಸಭೆಯಿಂದ ಎದ್ದು ಹೊರ ನಡೆದಿದ್ದಾರೆ.

ನೀತಿ ಆಯೋಗ ಸಭೆಯಲ್ಲಿ ನನಗಿಂತ ಮೊದಲು ಮಾತನಾಡಿದ ಮುಖ್ಯಮಂತ್ರಿಗಳಿಗೆ 20 ನಿಮಿಷ ಮಾತನಾಡಲು ಅವಕಾಸ ನೀಡಲಾಗಿದೆ. ಆದರೆ ನನಗೆ ಕೇವಲ 5 ನಿಮಿಷ ಅವಕಾಶ ಕೊಟ್ಟಿದ್ದರು. ಪಶ್ಚಿಮ ಬಂಗಾಳಕ್ಕೆ ಹಣಕಾಸು ನೆರವು ವಿಚಾರ ಪ್ರಸ್ತಾಪಿಸುತ್ತಿದ್ದಂತೆ ನನ್ನ ಮೈಕ್ ಮ್ಯೂಟ್ ಮಾಡಲಾಗಿದೆ. ತಾರತಮ್ಯ ಮಾಡುತ್ತಿರುವುದನ್ನು ಖಂಡಿಸಿ ಪ್ರತಿಭಟಿಸಿ ಸಭೆಯಿಂದ ಹೊರ ಬಂದಿದ್ದೇನೆ ಎಂದು ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button