
ಪ್ರಗತಿವಾಹಿನಿ ಸುದ್ದಿ: ಒಂದೆಡೆ ಬಿಸಿಲ ಝಳ, ಇನ್ನೊಂದೆಡೆ ಲೋಕಸಭಾ ಚುನಾವಣೆ ಕಾವು. ಈ ನಡುವೆ ರಾಜಕೀಯ ಪಕ್ಷಗಳ ನಾಯಕರ ಅಬ್ಬರದ ಪ್ರಚಾರ ಜೋರಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎನ್ ಡಿಎ ಮೈತ್ರಿ ಅಭ್ಯರ್ಥಿಯ ಪರ ಪ್ರಚಾರ ನಡೆಸುತ್ತಿದ್ದ ವೇಳೆಯೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಕುಸಿದು ಬಿದ್ದ ಘಟನೆ ನಡೆದಿದೆ.
ಮಹಾರಾಷ್ಟ್ರದ ಯವತ್ಮಾಲ್ ನಲ್ಲಿ ಚುನಾವಣ ಅಪ್ರಚಾರ ಸಭೆಯಲ್ಲಿ ಈ ಘಟನೆ ನಡೆದಿದೆ. ಸಚಿವ ನಿತಿನ್ ಗಡ್ಕರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಮಹಾಯುತಿ ಮೈತ್ರಿಕೂಟದ ಅಭ್ಯರ್ಥಿರಾಜಶ್ರೀ ಪಾಟೀಲ್ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು. ವೇದಿಕೆ ಮೇಲೆ ಮಾತನಾಡುತ್ತಿದ್ದ ನಿತಿನ್ ಗಡ್ಕರಿ ಏಕಾಏಕಿ ಕುಸಿದು ಬಿದ್ದು ಪ್ರಜ್ಞೆ ತಪ್ಪಿದ್ದಾರೆ.
ತಕ್ಷಣ ಅವರ ಅಂಗರಕ್ಷಕರು ಹಾಗೂ ಇತರ ನಾಯಕರು ಅವರನು ಎತ್ತಿ ಕುರ್ಚಿ ಮೇಲೆ ಕೂರಿಸಿದ್ದಾರೆ. ಸ್ಥಳದಲ್ಲಿಯೇ ಇದ್ದ ವೈದ್ಯರು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ನಿತಿನ್ ಗಡ್ಕರಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಬಳಿಕ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.