Latest

ಸಂಪೂರ್ಣ ಲಾಕ್ ಡೌನ್ ಸುಳಿವು ನೀಡಿದ ಕೇಂದ್ರ ಸಚಿವ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಸಂಪೂರ್ಣ ಲಾಕ್ ಡೌನ್ ಜಾರಿಗೆ ಒತ್ತಡಗಳು ಹೆಚ್ಚುತ್ತಿದ್ದು, ಸ್ವತ: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಕೂಡ ಈ ಬಗ್ಗೆ ಸುಳಿವು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಸಧ್ಯದ ಪರಿಸ್ಥಿತಿ ಗಮನಿಸಿದರೆ ಕಂಪ್ಲೀಟ್ ಲಾಕ್ ಡೌನ್ ಜಾರಿಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದೆ. ಸಣ್ಣ ಪ್ರಮಾಣದ ಲಾಕ್ ಡೌನ್ ಜಾರಿಯಿಂದ ಸೋಂಕು ನಿಯಂತ್ರಣ ಸಾಧ್ಯವಿಲ್ಲ. ಈಗ ಬೆಂಗಳೂರಿನಲ್ಲಿ ಮಾತ್ರ ಕರ್ಫ್ಯೂ ಜಾರಿ ಮಾಡುವುದು ಅಥವಾ ಸಣ್ಣ ಲಾಕ್ ಡೌನ್ ಹೇರುವುದರಿಂದ ಗ್ರಾಮೀಣ ಭಾಗಗಳಿಗೆ ಜನ ತೆರಳುತ್ತಾರೆ. ಇದರಿಂದಾಗಿ ಗ್ರಾಮೀಣ ಭಾಗಗಳಿಗೂ ಸೋಂಕು ಹರಡುತ್ತಿದೆ. ಹಾಗಾಗಿ ಮಹಾರಾಷ್ಟ್ರ ಮಾದರಲಿಯಲ್ಲಿ ಲಾಕ್ ಡೌನ್ ಜಾರಿಗೆ ತರುವ ಅಗತ್ಯವಿದೆ ಎಂದು ಹೇಳಿದರು.

Home add -Advt

ಇದೇ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಡಿವಿಎಸ್, ಸಿದ್ದರಾಮಯ್ಯ ಕೊರೊನಾ ಬಂದು ಅನಾರೋಗ್ಯಕ್ಕೀಡಾಗಿದ್ದಾರೋ ಅಥವಾ ಮಾನಸಿಕವಾಗಿ ಅನಾರೋಗ್ಯಕ್ಕೀಡಾಗಿದ್ದಾರೋ ಗೊತ್ತಿಲ್ಲ ಬೆಳಿಗ್ಗೆಯಿಂದ ಸಂಜೆವರೆಗೂ ಬಾಯಿಗೆ ಬಂದಂತೆ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.

ಸಿಎಂ ಬೆಡ್ ವ್ಯವಸ್ಥೆ ಮಾಡಿಸಿದರೂ ಬದುಕಲಿಲ್ಲ ಜೀವ

Related Articles

Back to top button