Kannada NewsLatest
*ಹಿಂಡಲಗಾ ಜೈಲಿನ ಕೈದಿಯಿಂದ ಕೇಂದ್ರ ಸಚಿವರಿಗೆ ಬೆದರಿಕೆ ಕೇಸ್; ಖತರ್ನಾಕ್ ಕೈದಿಯ ಹಿನ್ನೆಲೆ ಪತ್ತೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹಿಂಡಲಗಾ ಜೈಲಿನಲ್ಲಿದ್ದ ಕೈದಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತೀನ್ ಗಡ್ಕರಿ ಅವರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೈದಿಯ ಮೂಲ ಪತ್ತೆಯಾಗಿದೆ.
ಕೇಂದ್ರ ಸಚಿವರಿಗೆ ಬೆದರಿಕೆ ಹಾಕಿದ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದ ಕೈದಿ ಜಯೇಶ್ ಕುಮಾರ್ ಎಂದು ತಿಳಿದುಬಂದಿದೆ. ಜಯೇಶ್ ಕುಮಾರ್ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದವನು ಎನ್ನಲಾಗಿದೆ.
ಕೊಲೆ ಪ್ರಕರಣದಲ್ಲಿ ಜಯೇಶ್ ಕುಮಾರ್ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾನೆ. ಈತ ಈ ಹಿಂದೆ ಜೈಲಿನಲ್ಲಿದ್ದೇ ಎಡಿಜಿಪಿ ಅಲೋಕ್ ಕುಮಾರ್ ಅವರಿಗೂ ಜೀವ ಬೆದರಿಕೆ ಕರೆ ಮಾಡಿದ್ದ ಎಂದು ತಿಳಿದುಬಂದಿದೆ.
ಹಿಂಡಲಗಾ ಜೈಲಿನ ಕೈದಿಯಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ
https://pragati.taskdun.com/an-inmate-of-hindalaga-jail-threatened-union-minister-nitin-gadkari/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ