
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ನೂತನ ರಾಷ್ಟ್ರಾಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿದ್ದ ಜೆ.ಪಿ.ನಡ್ಡಾ ಅವರ ಅಧಿಕಾರಾವದಿ ಮುಗಿದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಿತಿನ್ ನಬಿನ್ ನಾಮಪತ್ರ ಸಲ್ಲಿಸಿದ್ದರು. ನಿತಿನ್ ನಬಿನ್ ಪರವಾಗಿ 37 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಅವರನ್ನು ಅವಿರೋಧವಾಗಿ ಆಯ್ಕೆ ಮಡಲಾಗಿದೆ.
ನಾಳೆ ಜನವರಿ 20ರಂದು ನಿತಿನ್ ನಬಿನ್ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ನಿತಿನ್ ನಬಿನ್ ಬಿಹಾರ ಬಿಜೆಪಿಯಲ್ಲಿ ಪ್ರಭಾವಿ ನಾಯಕರಾಗಿದ್ದಾರೆ. ನಿತಿನ್ ಅವರು ಮಾಜಿ ಶಾಸಕ ದಿ.ನಬಿನ್ ಕಿಶೋರ್ ಪ್ರಸಾದ್ ಸಿನ್ಹಾ ಅವರ ಮಗ. ಆರ್.ಎಸ್.ಎಸ್ ಹಿನ್ನಲೆಯನ್ನು ಹೊಂದಿದ್ದರಿಂದ ತಂದೆ ಬಳಿಕ ಬಿಜೆಪಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ನಿತೀಶ್ ಕುಮಾರ್ ಅವರ ಎನ್ ಡಿಎ ಸರ್ಕಾರದಲ್ಲಿ ರಸ್ತೆ ನಿರ್ಮಾಣ ಮತ್ತು ನಗರಾಭಿವೃದ್ಧಿ ಸಚಿವರಾಗಿದ್ದರು. ಬಿಜೆಪಿಯ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಆ ಹುದ್ದೆಗೆ ರಾಜೀನಾಮೆ ನೀಡಿದ್ದರು. ಈಗ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.


