Kannada NewsLatestNationalPolitics

*ಬೆಳಿಗ್ಗೆ ರಾಜೀನಾಮೆ ಸಂಜೆ ಮತ್ತೆ ಸಿಎಂ ಆಗಿ ಅಧಿಕಾರಕ್ಕೆ; 9ನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್*

ಪ್ರಗತಿವಾಹಿನಿ ಸುದ್ದಿ: ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದ್ದು, ಜೆಡಿಯು-ಆರ್ ಜೆಡಿ ಮೈತ್ರಿ ಸರ್ಕಾರ ಪತನಗೊಂಡ ಬೆನ್ನಲ್ಲೇ ಜೆಡಿಯು-ಬಿಜೆಪಿ ಹೊಸ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.

ಜೆಡಿಯು-ಆರ್ ಜೆಡಿ ಮೈತ್ರಿ ಸರ್ಕಾರ ಪತನ ಬೆನ್ನಲ್ಲೇ ಬೆಳಿಗ್ಗೆಯಷ್ಟೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನಿತೀಶ್ ಕುಮಾರ್, ಇದೀಗ ಜೆಡಿಯು-ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿದ್ದಾರೆ.

ಪಾಟ್ನಾದ ರಾಜಭವನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ 9ನೇ ಬಾರಿಗೆ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಪ್ರಮಾಣವಚನ ಬೋಧಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button