ಪ್ರಗತಿವಾಹಿನಿ ಸುದ್ದಿ; ಚೆನ್ನೈ: ನಿವಾರ್ ಚಂಡಮಾರುತ ಈಗಾಗಲೇ ತಮುಳುನಾಡಿಗೆ ಅಪ್ಪಳಿಸಿದ್ದು, ಬಿರುಗಾಳಿ ಸಹಿತ ಭಾರೀ ಮಳೆಗೆ ರಾಜ್ಯ ತತ್ತರಗೊಂಡಿದೆ. ತಮಿಳುನಾಡಿನಲ್ಲಿ ಭಾರೀ ಅವಾಂತರಗಳನ್ನು ಸೃಷ್ಟಿಸಿರುವ ಚಂಡಮಾರುತಕ್ಕೆ ಮೂವರು ಬಲಿಯಾಗಿದ್ದಾರೆ.
ನಿವಾರ್ ಚಂಡಮಾರುತದಿಂದಾಗಿ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಚೆನ್ನೈ ಸೇರಿದಂತೆ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ತಿರುವಲ್ಲೂರು, ಕಡಲೂರಿನಲ್ಲಿ ಮಳೆಯಿಂದಾಗಿ ಮನೆ ಗೋಡೆ ಕುಸಿದು ಇಬ್ಬರು ಸಾವನ್ನಪ್ಪಿದ್ದರೆ, ಮರ ಉರುಳಿಬಿದ್ದು ಓರ್ವ ಮೃತಪಟ್ಟಿದ್ದಾರೆ.
ಸಮುದ್ರದಲ್ಲಿ ರಕ್ಕಸಗಾತ್ರದ ಅಲೆಗಳು ಏಳುತ್ತಿದ್ದು, ಚಂಡಮಾರುತದ ಅಬ್ಬರ ಹೆಚ್ಚುತ್ತಿರುವುದರಿಂದ ತಮಿಳುನಾಡಿನಲ್ಲಿ 1 ಲಕ್ಷ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಪುದುಚೆರಿಯಲ್ಲಿ ಕೂಡ ಬಿರುಗಾಳ್ ಸಹಿತ ಭಾರೀ ಮಳೆಯಾಗುತ್ತಿದ್ದು, ಚಂಡಮಾರುತದ ಪರಿಣಾಮ ಕರ್ನಾಟಕ, ಆಂಧ್ರಪ್ರದೇಶಗಳಲ್ಲೂ ಮಳೆಯಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ