*ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ನಿಜ: ಡಿಸಿಪಿ ಜಗದೀಶ್ ರೋಹನ್ *
ಪ್ರಗತಿವಾಹಿನಿ ಸುದ್ದಿ: ಇಂದು ಬೆಳಗಾವಿಯ ನ್ಯಾಯಾಲಯದ ಆವರಣದಲ್ಲಿ ಪಾಕ್ ಪರ ಘೋಷಣೆ ಕೂಗಿದ ಎನ್ನುವ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ವಕೀಲಕರೇ ಥಳಿಸಿದ ಘಟನೆ ನಡೆದಿತ್ತು, ಆರೋಪಿಯನ್ನು ವಿಚಾರಣಗೆ ಕರೆತಂದಾಗ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ನಿಜ ಎಂದು ಡಿಸಿಪಿ ಜಗದೀಶ್ ರೋಹನ್ ಅವರು ಮಾಹಿತಿ ನೀಡಿದ್ದಾರೆ.
ಬುಧವಾರ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿ ಮಾತನಾಡಿದ ಅವರು, ಜಾಕೀರ್ ಅಲಿಯಾಸ್ ಜಯೇಶ್ ಪೂಜಾರಿ ನ್ಯಾಯಾಲಯಕ್ಕೆ ವಿಚಾರಣೆ ಕರೆ ತಂದಾಗ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ. ಅವನ ವಿಚಾರಣೆ ನಡೆಸಲಾಗುತ್ತದೆ.
ಜಾಕೀರ್ ಅಲಿಯಾಸ್ ಜಯೇಶ್ ಪೂಜಾರಿ ಮೂಲತಃ ಮಂಗಳೂರು ಮೂಲಕ ಆರೋಪಿಯಾಗಿದ್ದಾನೆ. ಆರೋಪಿ ಹೆಸರು ಬದಲಾಯಿಸಿಕೊಂಡಿರುವ ಕುರಿತು ತನಿಖೆ ನಡೆಯುತ್ತಿದೆ. ಜಯೇಶ್ ಪೂಜಾರಿ ಎರಡೂ ಎರಡೂ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದಾನೆ. ಹಿಂಡಲಗಾ ಕಾರಾಗೃಹದಲ್ಲಿ ಇರುವ ಈತನಿಗೆ ನ್ಯಾಯಾಲಯಕ್ಕೆ ವಿಚಾರಣೆಗೆ ಕರೆ ತರಲಾಗಿತ್ತು ಆಗ ಅವನು ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ನಿಜಾ ಎಂದರು.
ಜಯೇಶ್ ಕೇರಳಕ್ಕೆ ಹೋಗಿ ಇಸ್ಲಾಂ ಗೆ ಮತಾಂತರವಾಗಿದ್ದಾನೆ ಎನ್ನುವ ಮಾಹಿತಿ ಇದೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ