ಪ್ರಗತಿವಾಹಿನಿ ಸುದ್ದಿ, ನವದೆಹಲಿ:
ಬಿಜೆಪಿ ಸಧ್ಯಕ್ಕೆ ರಾಷ್ಟ್ರೀಯ ಮತ್ತು ರಾಜ್ಯ ಅಧ್ಯಕ್ಷರ ಬದಲಾವಣೆ ಮಾಡದಿರಲು ನಿರ್ಧರಿಸಿದೆ. ರಾಷ್ಟ್ರೀಯ ಅಧ್ಯಕ್ಷರಾಗಿ ಅಮಿತ ಸಾ ಹಾಗೂ ರಾಜ್ಯಾಧ್ಯಕ್ಷರಾಗಿ ಬಿ.ಎಸ್.ಯಡಿಯೂರಪ್ಪ ಈ ವರ್ಷಾಂತ್ಯದವರೆಗೂ ಮುಂದುವರಿಯಲಿದ್ದಾರೆ.
ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ಚುನಾವಣೆ ಬಳಿಕ ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆ ಮಾಡಬಹುದು. ಲೋಕಸಭಾ ಚುನಾವಣೆಯಲ್ಲಿ ಭಾರಿ ಜಯಭೇರಿ ಭಾರಿಸಲು ಕಾರಣರಾಗಿರುವ ಅಮಿತ ಶಾ ಅವರನ್ನು ತಕ್ಷಣ ಬದಲಾಯಿಸಿ ರಿಸ್ಕ್ ತೆಗೆದುಕೊಳ್ಳಲು ಬಿಜೆಪಿ ಸಿದ್ದವಿಲ್ಲ. ಜೆ.ಪಿ.ನಡ್ಡಾ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಮಾಡಿ 6 ತಿಂಗಳ ಬಳಿಕ ಅಧ್ಯಕ್ಷರನ್ನಾಗಿ ಮಾಡುವ ಸಾಧ್ಯತೆ ಇದೆ.
ಕರ್ನಾಟಕದಲ್ಲೂ ಯಡಿಯೂರಪ್ಪ ಬದಲಾಯಿಸಿದರೆ ತಕ್ಷಣಕ್ಕೆ ಪ್ರಬಲ ನಾಯಕ ಯಾರು ಎನ್ನುವ ಜಿಜ್ಞಾಸೆ ನಡೆದಿದೆ. ಅಧ್ಯಕ್ಷ ಸ್ಥಾನಕ್ಕೆ ಹಲವು ಆಕಾಂಕ್ಷಿಗಳಿದ್ದಾರೆ. ಜಾತಿ ಲೆಕ್ಕಾಚಾರ ಮತ್ತು ಸಂಘಟನಾ ಶಕ್ತಿಯ ಮೇಲೆ ಚಿಂತನೆ ನಡೆದಿದೆ. ಆದರೂ ಈ ವರ್ಷಾಂತ್ಯದ ಹೊತ್ತಿಗೆ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.