ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ನೀಡಲಾಗುತ್ತಿರುವ ಬಸ್ ಪಾಸ್‍ಗಳ ದರವನ್ನು ಹೆಚ್ಚಿಸುವುದಿಲ್ಲ ಮತ್ತು ಈ ಹಿಂದೆ ಇದ್ದ ಮಾನದಂಡಗಳನ್ನು ಬದಲಿಸುವ ಯಾವುದೇ ಉದ್ದೇಶವಿಲ್ಲ, ಆದ್ದರಿಂದ ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಅನಗತ್ಯ ಆತಂಕಕ್ಕೆ ಒಳಗಾಗಬಾರದು ಎಂದು ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಬಸ್ ಪಾಸ್‍ಗಳ ದರ ಹೆಚ್ಚಿಸಲಾಗುತ್ತದೆ ಎಂಬುದು ಕೇವಲ ವದಂತಿಯಷ್ಟೇ. ಆ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಕಳೆದ ಶೈಕ್ಷಣಿಕ ವರ್ಷದಲ್ಲಿ ಬಸ್ ಪಾಸ್‍ಗಳನ್ನು ಯಾವ ಪ್ರಮಾಣದ ದರದಲ್ಲಿ ವಿತರಿಸಲಾಗಿತ್ತೋ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿಯೂ ಸಹ ಅದೇ ರೀತಿಯಲ್ಲಿ ಅಳವಡಿಸಿಕೊಳ್ಳಲಾಗುವುದು, ಅಷ್ಟೇ ಅಲ್ಲ ಹಿಂದಿನ ಮಾನದಂಡಗಳನ್ನೇ ಮುಂದುವರೆಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ