Latest

ಸಿಎಂ ಬದಲಾವಣೆ ಇಲ್ಲ – ಅರುಣ ಸಿಂಗ್ ಸ್ಪಷ್ಟ ನುಡಿ

ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಷಯ ಕೇವಲ ಕಾಲ್ಪನಿಕ ಎಂದಿದ್ದಾರೆ.

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಬದಲಾಯಿಸುವ ಪ್ರಸ್ತಾವನೆ ಹೈಕಮಾಂಡ್ ಮುಂದೆ ಇಲ್ಲ ಎಂದು ಅವರು ತಿಳಿಸಿದರು.

ತನ್ಮೂಲಕ ರಾಜ್ಯದಲ್ಲಿ ನಡೆಯುತ್ತಿರುವ ಭನ್ನಮತೀಯ ಚಟುವಟಿಕೆಗಳಿಗೆ ತೆರೆ ಎಳೆಯುವ ಪ್ರಯತ್ನವನ್ನು ಅವರು ಮಾಡಿದ್ದಾರೆ.

ಇದೇ ವೇಳೆ, ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಸ್ತಾಪ ಕೂಡ ಇಲ್ಲ ಎಂದು ಹೇಳಿದ್ದಾರೆ.

ಲಾಕ್ ಡೌನ್ ಭವಿಷ್ಯ: 3 ಸಭೆಗಳ ಬಳಿಕ ಸಿಎಂ ತೀರ್ಮಾನ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button