Kannada NewsKarnataka NewsLatest

ಸಮಯಮಿತಿ, ಗುಣಮಟ್ಟದಲ್ಲಿ ರಾಜಿ ಇಲ್ಲ -ಲಕ್ಷ್ಮಿ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಗ್ರಾಮೀಣ ಕ್ಷೇತ್ರದ ಬಿಜಗರಣಿ ಹಾಗೂ ರಕ್ಕಸಕೊಪ್ಪ ಗ್ರಾಮಗಳಲ್ಲಿ ಸುಮಾರು 1.10 ಕೋಟಿ ರೂ. ವೆಚ್ಚದಲ್ಲಿ ರಸ್ತೆಯ ಡಾಂಬರೀಕರಣದ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪೂಜೆ ನೆರವೇರಿಸಿದರು.
 ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಗ್ರಾಮದ ರಸ್ತೆಗಳ ಅಭಿವೃದ್ಧಿಗೆ ಹಣ ಮಂಜೂರು ಮಾಡಿಸುವಲ್ಲಿ ಲಕ್ಷ್ಮಿ ಹೆಬ್ಬಾಳಕರ್ ಯಶಸ್ವಿಯಾಗಿದ್ದಾರೆ.
  ಗ್ರಾಮದ ಹಿರಿಯರು, ಗ್ರಾಮಸ್ಥರು, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಹಾಗೂ  ಕಾರ್ಯಕರ್ತರ ಉಪಸ್ಥಿತಿಯಲ್ಲಿ ಶಾಸಕರು ಪೂಜೆ ನೆರವೇರಿಸಿದರು.
ರಸ್ತೆ ಕಾಮಗಾರಿಗಳನ್ನು ನಡೆಸುವಾಗ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ಜೊತೆಗೆ ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು. ಈ ವಿಷಯದಲ್ಲಿ ಯಾವುದೇ ರೀತಿಯ ರಾಜಿ ಸಾಧ್ಯವಿಲ್ಲ ಎಂದು ಹೆಬ್ಬಾಳಕರ್ ಗುತ್ತಿಗೆದಾರರಿಗೆ ಎಚ್ಚರಿಸಿದರು. ಗ್ರಾಮಸ್ಥರು ಕೂಡ ಕಾಮಗಾರಿ ಸಮರ್ಪಕವಾಗಿ ನಡೆಯುವಂತೆ ನಿಗಾ ವಹಿಸಬೇಕು ಎಂದು ಅವರು ವಿನಂತಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button