EducationKarnataka News

*KAS ಪೂರ್ವಬಾವಿ ಮರುಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಕೆಎಎಸ್ ಪೂರ್ವಬಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಎಡವಟ್ಟು ಹಿನ್ನೆಲೆಯಲ್ಲಿ ಕೆ ಎ ಎಸ್ ಪೂರ್ವಬಾವಿ ಪರೀಕ್ಷೆ ಮರುಪರೀಕ್ಷೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಕೆಪಿಎಸ್ ಸಿ ಗೆ ಸೂಚನೆ ನೀಡಿದ್ದಾರೆ.

Home add -Advt

ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.

ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು.

ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.


Related Articles

Back to top button