*ದಕ್ಷಿಣ ಕನ್ನಡ ಹೆಸರು ಬದಲಾವಣೆ ಬೇಡ*: *ಸಿಎಂಗೆ ಪುರುಷೋತ್ತಮ ಬಿಳಿಮಲೆ ಮನವಿ*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ‘ಮಂಗಳೂರು’ ಎಂದು ಬದಲಾಯಿಸುವ ಪ್ರಸ್ತಾಪದಿಂದ ರಾಜ್ಯ ಸರ್ಕಾರ ಹಿಂದೆ ಸರಿಯಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಎನ್ನುವುದು ಕೇವಲ ಆಡಳಿತಾತ್ಮಕ ಹೆಸರಲ್ಲ. ಈ ಭಾಗದ ಐತಿಹಾಸಿಕ ಹಿನ್ನೆಲೆ, ಭಾಷಿಕ ಸಾಮರಸ್ಯ ಹಾಗೂ ಅಖಂಡ ಕರ್ನಾಟಕದೊಂದಿಗಿನ ಸಂಬಂಧವನ್ನು ಪ್ರತಿಬಿಂಬಿಸುವ ವಿಶಿಷ್ಟ ಗುರುತು ಎಂದು ಬಿಳಿಮಲೆ ಹೇಳಿದ್ದಾರೆ. ದಕ್ಷಿಣ ಕನ್ನಡದಲ್ಲಿ … Continue reading *ದಕ್ಷಿಣ ಕನ್ನಡ ಹೆಸರು ಬದಲಾವಣೆ ಬೇಡ*: *ಸಿಎಂಗೆ ಪುರುಷೋತ್ತಮ ಬಿಳಿಮಲೆ ಮನವಿ*