Kannada NewsKarnataka NewsLatest

ಪರೀಕ್ಷೆ ಮುಂದೂಡಿಕೆ ಇಲ್ಲ

ವಿಟಿಯು ಪ್ರಥಮ ಸೆಮಿಸ್ಟರ್ ಪರೀಕ್ಷೆಗಳು ಸೋಮವಾರ, ದಿನಾಂಕ 19 ರಿಂದಲೇ ನಡೆಯುತ್ತವೆ.

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಬಿ.ಇ./ಬಿ.ಟೆಕ್./ಬಿ.ಆರ್ಕ./ ಬಿ.ಪ್ಲಾನ್. ಕೋರ್ಸಗಳ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳ ಮುಂದೂಡಿಕೆ ಇಲ್ಲ ಎಂದು ವಿ ತಾ ವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು ವಿದ್ಯಾರ್ಥಿಗಳು ವದಂತಿಗಳಿಗೆ ಕಿವಿಗೊಡದೆ ಪರೀಕ್ಷೆಗೆ ಹಾಜರಾಗಬೇಕೆಂದು ತಿಳಿಸಿದೆ.
“ವಿ ಟಿ ಯು ಪರೀಕ್ಷೆ ಮುಂದೂಡಿಕೆ” ಎಂದು ಸುಳ್ಳು ಸುದ್ದಿಯು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ಕಾರಣ “ಪರೀಕ್ಷೆ ಮುಂದೂಡಿಕೆ ಇಲ್ಲ” ಎಂದು ವಿ ಟಿ ಯು ಸ್ಪಷ್ಟನೆ ನೀಡಿದ್ದು ಪ್ರಥಮ ಸೆಮಿಸ್ಟರ್ ಪರೀಕ್ಷೆಗಳು ಈ ಮೊದಲು ಪ್ರಕಟಿಸಿದಂತೆ ಸೋಮವಾರ ದಿನಾಂಕ 19/04/2021 ರಿಂದಲೇ ಪ್ರಾರಂಭಗೊಳ್ಳುತ್ತಿವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button