Latest

*ಇನ್ಮುಂದೆ 15 ವರ್ಷಗಳ ಹಳೆ ವಾಹನಗಳಿಗೆ ಸಿಗಲ್ಲ ಪೆಟ್ರೋಲ್, ಡೀಸೆಲ್*

ಪ್ರಗತಿವಾಹಿನಿ ಸುದ್ದಿ: ದೇಶದಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿದೆ. ಅದರಲ್ಲಿಯೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯದಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಮಾಲಿನ್ಯ ನಿಯಂತ್ರಣಕ್ಕೆ ನೂತನ ಬಿಜೆಪಿ ಸರ್ಕಾರ ಹೊಸ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ.

ಇನ್ಮುಂದೆ 15 ವರ್ಷಗಳ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಸಿಗುವುದಿಲ್ಲ ಎಂದು ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ತಿಳಿಸಿದ್ದಾರೆ.

ಮಾರ್ಚ್ 31ರ ಬಳಿಕ ಈ ನಿಯಮ ಜಾರಿಗೆ ಬರಲಿದೆ. ಪೆಟ್ರೋಲ್ ಬಂಕ್ ಗಳಲ್ಲಿ ಹಳೇ ವಾಹನಗಳಿಗೆ ಪೆಟ್ರೋಲ್ , ಡೀಸೆಲ್ ಸಿಗುವುವುದಿಲ್ಲ. ಹಳೆಯ ವಾಹನಗಳನ್ನು ಗುರುತಿಸಲು ವಿಶೇಷ ತಂಡ ರಚನೆ ಮಡಲಾಗುವುದು. ಮಾಲಿನ್ಯ ನಿಯಂತ್ರಣಕ್ಕೆ ಹೋಟೆಲ್ ಗಳಲ್ಲಿ ಹೊಗೆ ನಿರೋಧಕ ಅಳವಡಿಕೆ ಮಾಡುವುದು ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button