ಪ್ರಗತಿವಾಹಿನಿ ಸುದ್ದಿ: ಅಯೋಧ್ಯೆಯಲ್ಲಿ ನಾಳೆ ಜನವರಿ 22ರಂದು ಐತಿಹಾಸಿಕ ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಿಸಿದೆ.
ರಾಜ್ಯ ಸರ್ಕಾರ ಕೂಡ ರಜೆ ಘೋಷಿಸಬೇಕು ಎಂದು ಬಿಜೆಪಿ ನಾಯಕರು, ವಿವಿಧ ಸಂಘಟನೆ ಮುಖಂಡರು ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ರಜೆ ಘೋಷಣೆ ಮಾಡಲ್ಲ ಎಂದಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಳೆ ಸರ್ಕಾರಿ ರಜೆ ಘೋಷಣೆ ಮಾಡಲ್ಲ, ಶಾಲಾ-ಕಾಲೇಜಿಗೂ ರಜೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ದಾಸೋಹ, ಪಾನಕ-ಫಲಹಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ನಾಳೆ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಲಿದೆ ಎಂದು ತಿಳಿಸಿದರು.
ಇದೇ ವೇಳೆ ನಾಳೆ ಬೆಂಗಳೂರಿನ ಮಹದೇವಪುರದಲ್ಲಿಯೂ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮವಿದೆ. ಆ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಲಿದ್ದೇನೆ ಎಂದು ತಿಳಿಸಿದರು.
ಅಯೋಧ್ಯೆಯಲ್ಲಿ ಐತಿಹಾಸಿಕ ರಾಮ ಮಂದಿರ ಉದ್ಘಾಟನೆ ಹಾಗೂ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ನಾಳೆ ಗೋವಾ, ತಮಿಳುನಾಡು, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ