Kannada NewsKarnataka NewsLatest

*ಮಗನನ್ನು ಗುಂಡಿಟ್ಟು ಹತ್ಯೆಗೈದ ತಂದೆ*

ಪ್ರಗತಿವಾಹಿನಿ ಸುದ್ದಿ: ತಂದೆಯೇ ಮಗನನ್ನು ಗುಂಡಿಕ್ಕಿ ಕೊಂದಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ.

ಸುರೇಶ್ ಮಗನನ್ನೇ ಕೊಂದಿರುವ ಆರೋಪಿ. ನರ್ತನ್ ಬೋಪಣ್ಣ (32) ತಂದೆಯಿಂದಲೇ ಕೊಲೆಯಾಗಿರುವ ದುರ್ದೈವಿ. ಕಾಮಾಕ್ಷಿಪಾಳ್ಯ ವ್ಯಾಪ್ತಿಯ ಕರೆಕಲ್ ಮನೆಯಲ್ಲಿ ಈ ಘಟನೆ ನಡೆದಿದೆ.

Home add -Advt

ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಷ್ಟರಲ್ಲಿ ಗುಂಡೇಟಿನಿಂದ ನರ್ತನ್ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ. ತಕ್ಷಣ ಆತನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.

ತಂದೆಯೇ ಮಗನನ್ನು ಗುಂಡಿಟ್ಟು ಹತ್ಯೆ ಮಾಡಲು ಕಾರಣ ತಿಳಿದುಬಂದಿಲ್ಲ.


Related Articles

Back to top button