
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ದಿನಾಂಕ 09-10-23 ರಂದು ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಭೆಯಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಬೇಕಿರುವುದರಿಂದ ಅಂದು ನಡೆಸಲು ಉದ್ದೇಶಿಸಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಜನತಾ ದರ್ಶನದ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು.ಅಡಚಣೆಗಾಗಿ ವಿಷಾದಿಸುತ್ತೇವೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.