ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಲಸೆ ಕಾರ್ಮಿಕರಿಗೆ ಮಾಡಲಾಗಿದ್ದ ಉಚಿತ ಬಸ್ ವ್ಯವಸ್ಥೆ ನಿನ್ನೆಗೆ ಕೊನೆಗೊಂಡಿದೆ. ಹಾಗಾಗಿ ಇಂದಿನಿಂದ ಯಾವುದೇ ಉಚಿತ ಬಸ್ಸುಗಳು ಇರುವುದಿಲ್ಲ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.
ಲಾಕ್ ಡೌನ್ ಹಿನ್ನಲೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರನ್ನು ಒಂದು ವಾರದಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 1,08,300 ಕಾರ್ಮಿಕರನ್ನು ಕೆಎಸ್ಆರ್ಟಿ ಬಸ್ಗಳಲ್ಲಿ ಸ್ಥಳಾಂತರ ಮಾಡಲಾಗಿದೆ. ಸುಮಾರು 3610 ಬಸ್ಗಳಲ್ಲಿ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಕಳಿಸಿಕೊಡಲಾಗಿದೆ ಎಂದು ಕೆಎಸ್ಆರ್ಟಿಸಿ ಪ್ರಕಟಣೆ ಹೊರಡಿಸಿದೆ.
ರಾಜ್ಯದ ಮೂಲೆ ಮೂಲೆಗಳಲ್ಲಿ ಸಿಲುಕಿಕೊಂಡಿದ್ದ ಕಾರ್ಮಿಕರು ತಮ್ಮ ಊರುಗಳಿಗೆ ವಾಪಸ್ಸಾಗುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಸಿಲುಕಿಕೊಂಡ ಹೊರ ರಾಜ್ಯದ ಕಾರ್ಮಿಕರ ಗೋಳು ಕೇಳುವವರೇ ಇಲ್ಲದಂತಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ