ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ದೇಶದಲ್ಲಿ ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಐವರು ಜಡ್ಜ್‌ಗಳನ್ನೊಳಗೊಂಡ ಸಾಂವಿಧಾನಿಕ ಪೀಠದಲ್ಲಿ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ಮೂವರು ನ್ಯಾಯಮೂರ್ತಿಗಳು ವಿರೋಧ ವ್ಯಕ್ತಪಡಿಸಿದರು. ಇಬ್ಬರು ನ್ಯಾಯಮೂರ್ತಿಗಳು ಬೆಂಬಲ ವ್ಯಕ್ತಪಡಿಸಿದರು. ಇದೇ ವೇಳೆ ಇದು ಇದು ಸರಕಾರಕ್ಕೆ ಬಿಟ್ಟ ವಿಚಾರ ಎಂದೂ ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ.
ನ್ಯಾಯಮೂರ್ತಿಗಳಾದ ಭಟ್, ಹಿಮಾ ಕೊಹ್ಲಿ ಮತ್ತು ನರಸಿಂಹ ಅವರು ಬಹುಮತದ ಅಭಿಪ್ರಾಯವನ್ನು ಮಂಡಿಸಿದರು. ಸಿಜೆಐ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಕೌಲ್ ಲೈಂಗಿಕ ಅಲ್ಪಸಂಖ್ಯಾತರ ಅಭಿಪ್ರಾಯ ಮಂಡಿಸಿದರು.
ಮದುವೆ ಮೂಲಭೂತ ಹಕ್ಕಲ್ಲ ಎಂಬುದನ್ನು ಎಲ್ಲ ಐವರು ನ್ಯಾಯಮೂರ್ತಿಗಳೂ ಒಪ್ಪಿಕೊಂಡಿದ್ದಾರೆ. ಮತ್ತು ಬಹುಮತದ ತೀರ್ಪಿನಲ್ಲಿ, ಮಾತ್ರ ಸಲಿಂಗ ವಿವಾಹಕ್ಕೆ ವಿರೋಧ ವ್ಯಕ್ತವಾಗಿದೆ.
ಭಾರತದಲ್ಲಿ ಸಲಿಂಗ ವಿವಾಹಗಳನ್ನು ಕಾನೂನು ಬದ್ಧಗೊಳಿಸುವ ವಿಚಾರಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಮಂಗಳವಾರಕ್ಕೆ ಕಾಯ್ದಿರಿಸಿತ್ತು. ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್. ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿ.ಎಸ್. ನರಸಿಂಹ ಅವರನ್ನೊಳಗೊಂಡ ಪೀಠ 10 ದಿನಗಳ ವಿಚಾರಣೆಯ ನಂತರ ಈ ವರ್ಷ ಮೇ 11 ರಂದು ತೀರ್ಪನ್ನು ಕಾಯ್ದಿರಿಸಿತ್ತು.
ಹಿರಿಯ ವಕೀಲರಾದ ಎ.ಎಂ.ಸಿಂಘ್ವಿ, ರಾಜು ರಾಮಚಂದ್ರನ್, ಕೆ.ವಿ.ವಿಶ್ವನಾಥನ್, ಆನಂದ್ ಗ್ರೋವರ್, ಹಾಗೂ ಸೌರಭ್ ಕೃಪಾಲ್ ಅವರ ವಾದಗಳನ್ನೂ ಕೋರ್ಟ್ ಆಲಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ