Politics

*ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಒತ್ತಡ*: *ಗೃಹ ಸಚಿವ ಪರಮೇಶ್ವ‌ರ್ ಏನಂದ್ರು?*

ಪ್ರಗತಿವಾಹಿನಿ ಸುದ್ದಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಪರಮೇಶ್ವ‌ರ್ ಹೇಳಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮಗಳ ಜೊತೆ ಮಾತಾಡಿದ ಅವರು, ಗುತ್ತಿಗೆದಾರ ಸಚಿನ್ ಸೂಸೈಡ್ ಕೇಸ್ ಗೂ ಪ್ರಿಯಾಂಕ್ ಖರ್ಗೆ ಗೂ ಸಂಬಂಧ ಇಲ್ಲ. ಇದನ್ನ ರಾಜಕೀಯ ಕಾರಣಕ್ಕೆ ಬಿಜೆಪಿ ಬಳಸಿಕೊಳ್ತಿದೆ. ಈ ಬಗ್ಗೆ ಸಿಐಡಿ ತನಿಖೆ ಮಾಡಿಸುತ್ತೇವೆ ಎಂದು ಹೇಳಿದರು.

ಸಚಿನ್‌ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ಎಲ್ಲಾ ಪ್ರಕರಣಗಳನ್ನ ಸಿಬಿಐ ತನಿಖೆಗೆ ಕೊಡಲು ಆಗಲ್ಲ. ನಮ್ಮ ಸಿಐಡಿ ಸಮರ್ಥವಾಗಿದೆ. ಬಿಜೆಪಿ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಬಿಜೆಪಿ ಅನಾವಶ್ಯಕ ಅಪಾದನೆ ಮಾಡುತ್ತಿದೆ. ಸಚಿನ್ ಡೆತ್ ನೋಟ್ ನಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿಲ್ಲ. ಎಲ್ಲಾ ಕೇಸ್ ಗಳನ್ನ ಸಿಬಿಐಗೆ ನೀಡಲಾಗಲ್ಲ. ಎಲ್ಲದರಲ್ಲಿಯೂ ಹುಳುಕು ಹುಡುಕುವುದು ತಪ್ಪು. ಕೇಸರಿ ನಾಯಕರು ಟೀಕೆ ಟಿಪ್ಪಣಿ ಮಾಡುವುದನ್ನ ನಿಲ್ಲಿಸಬೇಕು ಎಂದು ಹೇಳಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button