ಈ ಬಾರಿ ಮಹಾನಗರ ಪಾಲಿಕೆ ಕಾಂಗ್ರೆಸ್ ಮಯ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಆಯುಕ್ತರ ಮನೆಯ ಮುಂದೆ ಬಿಜೆಪಿ ಶಾಸಕರೇ ಕಸ ತಂದು ಚೆಲ್ಲುವಂತಹ ಪರಿಸ್ಥಿತಿ ಬರುತ್ತದೆ ಎಂದರೆ ಮಹಾನಗರ ಪಾಲಿಕೆಯ ಮೇಲೆ ಯಾರ ಹಿಡಿತವೂ ಇಲ್ಲ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕಿಡಿಕಾರಿದ್ದಾರೆ.
ಮಹಾನಗರ ಪಾಲಿಕೆ ಚುನಾವಣೆಗೆ ಮತದಾನ ಮಾಡಿದ ನಂತರ ಮಾತನಾಡಿದ ಅವರು, ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಸರಕಾರವಿದೆ. ಬೆಳಗಾವಿ ನಗರದಲ್ಲಿ ಇಬ್ಬರು ಬಿಜೆಪಿ ಶಾಸಕರಿದ್ದಾರೆ. ಆದರೆ ಬಿಜೆಪಿ ಶಾಸಕರೇ ಪಾಲಿಕೆ ಆಯುಕ್ತರ ಮನೆಯ ಮುಂದೆ ಕಸ ಚೆಲ್ಲುತ್ತಾರೆ ಎಂದರೆ ಪರಿಸ್ಥಿತಿ ಹೇಗಿದೆ ಎನ್ನುವುದು ಗೊತ್ತಾಗುತ್ತದೆ ಎಂದರು.
ಸ್ಮಾರ್ಟ್ ಸಿಟಿ ಯೋಜನೆ ಹೇಗಾಗಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಸಾವಿರ ಕೋಟಿ ರೂ. ಯೋಜನೆ ಮೇಲೆ ಇದ್ದ ನಿರೀಕ್ಷೆ ಹುಸಿಯಾಗಿದೆ. ಸಿದ್ದರಾಮಯ್ಯ ಸರಕಾರವಿದ್ದಾಗ 3 ವರ್ಷ ಪಾಲಿಕೆಗೆ ತಲಾ 120 ಕೋಟಿ ರೂ. ಅನುದಾನ ನೀಡಿದೆ ಎಂದು ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
ಜನರು ಇಂದು ಬೆಲೆ ಏರಿಕೆಯಿಂದ ತತ್ತರಿಸಿಹೋಗಿದ್ದಾರೆ. ಬಿಜೆಪಿ ನಂಬಿ ಮೋಸಹೋಗಿದ್ದಾರೆ. ಹಾಗಾಗಿ ಈ ಬಾರಿ ಮಹಾನಗರ ಪಾಲಿಕೆಯನ್ನು ಕಾಂಗ್ರೆಸ್ ಮಯ ಮಾಡಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಮೃಣಾಲ ಹೆಬ್ಬಾಳಕರ್, ಯುವರಾಜ ಕದಂ ಮೊದಲಾದವರು ಇದ್ದರು.
ನಿಲ್ಲದ ಬೆಲೆ ಏರಿಕೆ : ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತೀವ್ರ ಆಕ್ರೋಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ