Latest

ಸಧ್ಯಕ್ಕೆ ಶಾಲೆ ಆರಂಭವಿಲ್ಲ – ಸಿಎಂ ಅಧ್ಯಕ್ಷತೆಯ ಸಭೆ ತೀರ್ಮಾನ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು –  ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಇಂದು ಮುಖ್ಯಮಂತ್ರಿಗಳ ಮಹತ್ವದ ಸಭೆ ನಡೆಯಿತು.

ಸಭೆಯ ಮುಖ್ಯಾಂಶಗಳನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್  ಸುದ್ದಿಗೋಷ್ಠಿಯಲ್ಲಿ ನೀಡಿದರು.

5,200 ಹಾಸಿಗೆಗಳನ್ನು ಕೋವಿಡ್ ಸೋಂಕಿತರಿಗೆ ಮೀಸಲಿಡಲು ಮುಖ್ಯಮಂತ್ರಿಗಳ ನಿರ್ದೇಶನ. ಒಂದು ವಾರದೊಳಗೆ ಹೆಚ್ಚುವರಿ 3,000 ಹಾಸಿಗೆಗಳು ಸೇರ್ಪಡೆ. ಸಭೆಗೆ ಹಾಜರಾಗದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ*.

• *ಕೋವಿಡ್ ಮತ್ತು ಕೋವಿಡ್ ಅಲ್ಲದ ಕಾಯಿಲೆಗಳಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕಾನೂನು ಕ್ರಮ*.

Home add -Advt

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳೆರಡೂ ಮಕ್ಕಳ ಆರೋಗ್ಯ ಕಾಪಾಡಲು ಬದ್ಧವಾಗಿವೆ. ಶಾಲೆಗಳನ್ನು ತೆರೆದರೆ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ಈಗಲೇ ಶಾಲೆ ಆರಂಭವಿಲ್ಲ.

• *ಲಕ್ಷಣರಹಿತ ಮತ್ತು ಅಲ್ಪ ಲಕ್ಷಣವುಳ್ಳ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ ಮತ್ತು ಹೋಂ ಐಸೋಲೇಶನ್ ಮಾಡುವ ನಿಟ್ಟಿನಲ್ಲಿ ಸರ್ಕಾರದ ಸುತ್ತೋಲೆ. ಖಾಸಗಿ ಆಸ್ಪತ್ರೆಗಳು ಲಕ್ಷಣರಹಿತ ಸೋಂಕಿತರನ್ನು ದಾಖಲು ಮಾಡಿಕೊಳ್ಳುವಂತಿಲ್ಲ*.

• ರಾಜ್ಯದಲ್ಲಿ ಇದುವರೆಗೆ 21,775 ಜನರು ಗುಣಮುಖರಾಗಿದ್ದು, ಇಂದು ರಾಜ್ಯದಲ್ಲಿ 24,909 RTPCR ಟೆಸ್ಟ್ ನಡೆಸಲಾಗಿದೆ. ರಾಜ್ಯದಲ್ಲಿ ಈಗ 85 ಕೋವಿಡ್ ಪರೀಕ್ಷಾ ಪ್ರಯೋಗಾಲಯಗಳಿದ್ದು ಮುಂದಿನ ದಿನಗಳಲ್ಲಿ ಇನ್ನೂ 25 ಲ್ಯಾಬ್ ಸ್ಥಾಪಿಸುವ ಚಿಂತನೆ ಇದೆ. ಮುಂದಿನ ದಿನಗಳಲ್ಲಿ 50,000 ಆರ್ಟಿಪಿಸಿಆರ್ ಟೆಸ್ಟ್ ಪ್ರತಿದಿನ ನಡೆಸುವ ಗುರಿ ಹೊಂದಲಾಗಿದೆ. ಇದುವರೆಗೆ 9.8 ಲಕ್ಷ ಟೆಸ್ಟ್ ನಡೆಸಲಾಗಿದ್ದು ಕೆಲವೇ ರಾಜ್ಯಗಳು ನಮಗಿಂತ ಹೆಚ್ಚು ಟೆಸ್ಟ್ ನಡೆಸಿವೆ.

• ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಪ್ರತಿ 10 ಲಕ್ಷ ಜನಸಂಖ್ಯೆಗೆ 149 ಪರೀಕ್ಷೆ ನಡೆಸಬೇಕಾಗಿದ್ದು, ರಾಜ್ಯದಲ್ಲಿ 300 ಜನರಿಗೆ ಟೆಸ್ಟ್ ಮಾಡಲಾಗುತ್ತಿದೆ. ಇನ್ನೂ 10 ಲಕ್ಷ ಆಂಟಿಜೆನ್ ಕಿಟ್ ಗಳಿಗೆ ಆರ್ಡರ್ ನೀಡಲಾಗಿದೆ. ಟೆಸ್ಟ್ ನಡೆಸುವಲ್ಲಿ ಮೊದಲ 10 ರಾಜ್ಯಗಳಲ್ಲಿ ಕರ್ನಾಟಕವೂ ಒಂದು.

Related Articles

Back to top button