
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -ಕೇಂದ್ರ ಸರಕಾರ ಶನಿವಾರ ಮಂಡಿಸಿರುವ ಬಜೆಟ್ ನಲ್ಲಿ ರಾಷ್ಟ್ರ ಎದುರಿಸುತ್ತಿರುವ ಪ್ರಮುಖ, ಗಂಭೀರ ಸಮಸ್ಯೆಗಳಿಗೆ ಯಾವುದೇ ಪರಿಹಾರ ನೀಡಲಾಗಿಲ್ಲ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ.
ರಾಷ್ಟ್ರ ತೀವ್ರ ನಿರುದ್ಯೋಗ ಸಮಸ್ಯೆ ಎದುರಿಸುತ್ತಿದೆ. ಯುವಕರು ಉದ್ಯೋಗವಿಲ್ಲದೆ ಪರದಾಡುತ್ತಿದ್ದಾರೆ. ಉದ್ಯೋಗಸ್ಥರು ಇರುವ ಉದ್ಯೋಗವನ್ನು ಕಳೆದುಕೊಳ್ಳುತ್ತಿದ್ದಾರೆ. ಹಲವಾರು ಪ್ರಮುಖ ಕಂಪನಿಗಳು ಬಾಗಿಲು ಹಾಕುತ್ತಿವೆ. ಆರ್ಥಿಕ ಕ್ಷೇತ್ರ ತೀವ್ರ ಸಮಸ್ಯೆಯಿಂದ ಬಳಲುತ್ತಿದೆ.
ಇದಕ್ಕೆಲ್ಲ ಬಜೆಟ್ ನಲ್ಲಿ ಯಾವುದೇ ಪರಿಹಾರ ಕಂಡುಕೊಂಡಿಲ್ಲ. ಇದರಿಂದಾಗಿ ರಾಷ್ಟ್ರ ಪ್ರಗತಿಯಲ್ಲಿ ತೀವ್ರ ಹಿನ್ನಡೆ ಅನುಭವಿಸುವಂತಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ