
ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬೆಳಗಾವಿ ವಿಭಾಗದ ಕಾಂಗ್ರೆಸ್ ಕೋ ಆರ್ಡಿನೇಟರ್ ಆಗಿ ಎಐಸಿಸಿ ಒಬಿಸಿ ವಿಭಾಗದ ಕೋ ಆರ್ಡಿನೇಟರ್ ನಾಗರಾಜ ನಾರ್ವೇಕರ್ ಅವರನ್ನು ನೇಮಕ ಮಾಡಲಾಗಿದೆ.
ಎಐಸಿಸಿ ಒಬಿಸಿ ವಿಭಾಗದ ಚೇರಮನ್ ಕ್ಯಾ.ಅಜಯ ಸಿಂಗ್ ಯಾದವ ಈ ಕುರಿತು ಆದೇಶ ಹೊರಡಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾಗುವಂತೆಯೂ, ಈ ಕುರಿತು ವರದಿ ಸಲ್ಲಿಸುವಂತೆಯೂ ಸೂಚಿಸಲಾಗಿದೆ. ಚುನಾವಣೆ ನಂತರವೂ ಸಮಗ್ರ ವರದಿ ಸಲ್ಲಿಸುವಂತೆ ಅವರಿಗೆ ಸೂಚಿಸಲಾಗಿದೆ.
ನಾಗರಾಜ ನಾರ್ವೇಕರ್ ಶಿರಸಿಯವರಾಗಿದ್ದು, ಹಲವಾರು ವರ್ಷಗಳಿಂದ ಕಾಂಗ್ರೆಸ್ ನಲ್ಲಿ ಸಕ್ರೀಯರಾಗಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷರಾಗಿಯೂ ಅವರು ಕೆಲಸ ಮಾಡಿದ್ದಾರೆ.